ಅಬ್ಬಕ್ಕ ಉತ್ಸವ ಅರ್ಥಪೂರ್ಣವಾಗಿ ಆಚರಿಸಿ- ಜಿಲ್ಲಾಧಿಕಾರಿ

7:44 PM, Friday, February 15th, 2019
Share
1 Star2 Stars3 Stars4 Stars5 Stars
(No Ratings Yet)
Loading...

DC Shenthilಮಂಗಳೂರು : ವೀರರಾಣಿ ಅಬ್ಬಕ್ಕ ಉತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಅಗತ್ಯ ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಹೇಳಿದರು.

ಅವರಿಂದು ಜಿಲ್ಲಾ ಪಂಚಾಯತ್‍ನ ಮಿನಿ ಸಭಾಂಗಣದಲ್ಲಿ ಆಯೋಜಿಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಉಳ್ಳಾಲದ ಸಮುದ್ರ ತೀರದಲ್ಲಿ ಉತ್ತಮ ವೇದಿಕೆಯನ್ನು ರಚಿಸಿ ಅತ್ಯುತ್ತಮ ಸಾಂಸ್ಕøತಿಕ ಕಾರ್ಯಕ್ರಮಗಳನ್ನೊಳಗೊಂಡಂತೆ ರಾಣಿ ಅಬ್ಬಕ್ಕನ ಐತಿಹ್ಯವನ್ನು ಸಾರುವ ಕಾರ್ಯಕ್ರಮಗಳನ್ನು ರೂಪಿಸಲು ವಿವಿಧ ಸಮಿತಿಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿ ಸಿಇಒ ಡಾ ಸೆಲ್ವಮಣಿ ಅವರು ಕಾರ್ಯಕ್ರಮಕ್ಕೆ ನೋಡಲ್ ಅಧಿಕಾರಿಯಾಗಿದ್ದು, ಸಭೆಯ ಬಳಿಕ ಮೂಡಾ ಆಯುಕ್ತರಾದ ಶ್ರೀಕಾಂತ್ ರಾವ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ನಾಗರಾಜ್, ಕನ್ನಡ ಸಂಸ್ಕøತಿ ಇಲಾಖೆ ರಾಜೇಶ್, ನಿರ್ಮಿತಿಯ ರಾಜೇಂದ್ರ ಕಲ್ಬಾವಿ, ನಗರಸಭೆ ಆಯುಕ್ತರಾದ ವಾಣಿ ವಿ ಆಳ್ವ, ಉಳ್ಳಾಲಕ್ಕೆ ಭೇಟಿ ನೀಡಿ ವೇದಿಕೆ ರಚನೆ ಸಂಬಂಧ ಸ್ಥಳ ಪರಿಶೀಲನೆ ನಡೆಸಿ ಸಮುದ್ರ ತೀರದಲ್ಲೇ ವೇದಿಕೆ ನಿರ್ಮಿಸಿ ಒಂದೇ ವೇದಿಕೆಯಡಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.

ಉಳ್ಳಾಲದ ಮೊಗವೀರ ಶಾಲೆಯಲ್ಲಿ ಅಬ್ಬಕ್ಕ ಚರಿತ್ರೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಆರ್ಟ್ ಟೀಚರ್‍ಗಳ ಮೂಲಕ ತೈಲವರ್ಣ ಚಿತ್ರಗಳನ್ನು ರಚಿಸಿ ಪ್ರದರ್ಶಿಸುವ ಬಗ್ಗೆ ನಿರ್ಧರಿಸಲಾಯಿತು. ರಾಣಿ ಅಬ್ಬಕ್ಕಳ ಚರಿತೆಯಲ್ಲಿ ಉಳ್ಳಾಲದ ಸಮುದ್ರದಲ್ಲಿ ನಡೆದ ಯುದ್ಧಗಳ ಮಾದರಿಯನ್ನು ರಚಿಸಿ ಪ್ರದರ್ಶಿಸುವ ಬಗ್ಗೆಯೂ ಚರ್ಚಿಸಲಾಯಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English