ಮಂಗಳೂರು: ವಿಜಯ ಬ್ಯಾಂಕ್ ಉಳಿಸಿ ಸರ್ವಪಕ್ಷಗಳ ಜನಪ್ರತಿನಿಧಿಗಳ ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಮತ್ತು ಶಾಸಕ ವೇದವ್ಯಾಸ್ ಕಾಮತ್ ನಡುವೆ ಮಾತಿನ ಚಕಮಕಿ ನಡೆಯಿತು.
ನಗರದ ಪುರಭವನದಲ್ಲಿ ಇಂದು ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆಯಿತು. ಮಂಗಳೂರಿನ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪ್ಪಾಡಿಯವರ ಮುತುವರ್ಜಿಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಎಲ್ಲ ಪಕ್ಷದವರನ್ನು ಒಟ್ಟು ಸೇರಿಸಿ ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡುವ ಈ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಮತ್ತು ಮಾಜಿ ಸಚಿವ ರಮಾನಾಥ ರೈಯವರು ಭಾಗವಹಿಸಿದ್ದರು.
ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಗುಡುಗುವುದು ಸರಿಯಲ್ಲ ಎಂದ ಶಾಸಕ ವೇದವ್ಯಾಸ್ ಹೇಳಿಕೆಗೆ ರೈ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಕೇಂದ್ರದಲ್ಲಿ ಸಂಸದರು ವಿಜಯಾ ಬ್ಯಾಂಕ್ ವಿಲೀನವನ್ನು ವಿರೋಧಿಸಿ ಧ್ವನಿ ಎತ್ತಬೇಕು. ಅಲ್ಲದೆ ಈ ವಿಲೀನವನ್ನು ವಿರೋಧಿಸಿ ಜಿಲ್ಲೆಯ ಸಂಸದರು, ಸಚಿವರು ಹಾಗೂ ಶಾಸಕರು ಜವಾಬ್ದಾರಿ ವಹಿಸಿ ಕೆಲಸ ಮಾಡಬೇಕು. ಈ ಹಿನ್ನೆಲೆಯಲ್ಲಿ ಎಲ್ಲರನ್ನು ಒಟ್ಟು ಸೇರಿಸುವ ಜವಾಬ್ದಾರಿ ಸಂಸದರದ್ದು ಎಂದು ಹೇಳಿದರು. ರೈಯವರ ಈ ಹೇಳಿಕೆಯ ಬಳಿಕ ಶಾಸಕ ವೇದವ್ಯಾಸ ಕಾಮತ್, ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ರೈ ಮತ್ತು ವೇದವ್ಯಾಸ ಕಾಮತ್ ನಡುವೆ ಮಾತಿನ ಚಕಮಕಿ ನಡೆಯಿತು.
Click this button or press Ctrl+G to toggle between Kannada and English