ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಲಯುತ ರಾಷ್ಟ್ರವಾಗಿ ರೂಪಿಸುವುದೇ ನಮ್ಮ ಸರ್ಕಾರದ ಧ್ಯೇಯ : ರಾಜನಾಥ್ ಸಿಂಗ್

11:55 PM, Saturday, March 9th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

ರಾಜನಾಥ್ ಸಿಂಗ್ಮಂಗಳೂರು: ಭಾರತವನ್ನು ಶಕ್ತಿಶಾಲಿ ರಾಷ್ಟ್ರವಾಗಿ, ಆರ್ಥಿಕವಾಗಿ ಸುದೃಢ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಲಯುತ ರಾಷ್ಟ್ರವಾಗಿ ರೂಪಿಸುವುದೇ ನಮ್ಮ ಸರ್ಕಾರದ ಧ್ಯೇಯವಾಗಿದೆ. ಇಂದು ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಶ್ವದ 6ನೇ ದೊಡ್ಡ ರಾಷ್ಟ್ರವಾಗಿದೆ. ದೇಶದಲ್ಲಿ ಹಣದುಬ್ಬರದ ವೇಗ ಶೇ. 50ರಷ್ಟು ಕುಸಿತ ಕಂಡಿದೆ. ಅಲ್ಲದೆ ಶೌಚಾಲಯ ನಿರ್ಮಾಣದಲ್ಲೂ ಶೇ. 99ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು.

ನಗರದ ಎಂಜಿ ರಸ್ತೆಯಲ್ಲಿರುವ ಟಿಎಂಎ ಪೈ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು  ಭಾರತವನ್ನು ವಿಶ್ವಗುರು ರಾಷ್ಟ್ರವನ್ನಾಗಿ ಮಾಡಿ, ಸೂಪರ್ ಪವರ್ ದೇಶವಾಗಿ ರೂಪಿಸುವುದು ಕೇಂದ್ರ ಸರ್ಕಾರದ ಗುರಿ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ಭಾರತ ಮೂರನೇಯ ದೇಶವಾಗಿ ಮೂಡಿ ಬರಲಿದೆ ಎಂದರು.

ರಾಜನಾಥ್ ಸಿಂಗ್ಈ ಬಜೆಟ್ನಲ್ಲಿ ರೈತರಿಗೆ ವಾರ್ಷಿಕ ಆರು ಸಾವಿರ ಧನಸಹಾಯ ನೀಡುವ ರೈತ ಸನ್ಮಾನ್ ಯೋಜನೆ, 60 ವರ್ಷ ದಾಟಿದ ಅಸಂಘಟಿತ ವಲಯದ ಕಾರ್ಮಿಕರಿಗೆ ಮೂರು ಸಾವಿರ ರೂ. ವಾರ್ಷಿಕ ಪಿಂಚಣಿ ಯೋಜನೆಯನ್ನು ಹಮ್ಮಿಕೊಂಡಿದೆ. ಅಲ್ಲದೆ ಮೀನುಗಾರರಿಗೆ ಪ್ರತ್ಯೇಕವಾದ ಸಚಿವಾಲಯ ಆರಂಭಿಸಿದೆ ಎಂದರು.

ಪುಲ್ವಾಮಾ ಘಟನೆಯ ಬಳಿಕ ಭಾರತ ತೆಗೆದುಕೊಂಡ ನಿಲುವಿಗೆ ವಿಶ್ವದಾದ್ಯಂತ ಬೆಂಬಲ ವ್ಯಕ್ತವಾಗಿದೆ. ಪಾಕಿಸ್ತಾನಕ್ಕೆ ಚೀನಾದ ನೆರವು ದೊರಕದೆ ಏಕಾಂಗಿಯಾಗಬೇಕಾಯಿತು. ಭಾರತ ಸೇನೆಯ ದಾಳಿಯು ಭಯೋತ್ಪಾದಕರಿಗೆ ರಕ್ಷಣೆ ನೀಡುತ್ತಿರುವ ಪಾಕಿಸ್ತಾನಕ್ಕೆ ನೀಡಿದ ಎಚ್ಚರಿಕೆಯ ಸಂದೇಶವಾಗಿದೆ. ಆದರೆ ವಿಪಕ್ಷಗಳು ದಾಳಿಯಲ್ಲಿ ಎಷ್ಟು ಜನ ಭಯೋತ್ಪಾದಕರು ಸತ್ತಿದ್ದಾರೆ ಎಂದು ಸಂಶಯ ವ್ಯಕ್ತಪಡಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜನಾಥ್ ಸಿಂಗ್ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಅಲ್ಲಿನ ಜನರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದ ಅವರು, ಪುಲ್ವಾಮಾದಲ್ಲಿ ಮಡಿದ ಕರ್ನಾಟಕದ ಯೋಧ ಗುರುವಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್, ಎಂಎಲ್ಸಿ ಕೋಟಾ ಶ್ರೀನಿವಾಸ್ ಪೂಜಾರಿ, ಎಂಪಿ ಶೋಭಾ ಕರಂದ್ಲಾಜ್, ಸುನಿಲ್ ಕುಮಾರ್ ಕಾರ್ಕಳ ಮತ್ತಿತರರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English