ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

10:22 PM, Wednesday, March 13th, 2019
Share
1 Star2 Stars3 Stars4 Stars5 Stars
(No Ratings Yet)
Loading...

Rajajeshwari  ಮಂಗಳೂರು : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದು ಮುಂಜಾನೆಯಿಂದಲೇ ಮಂಗಳೂರು  ಬ್ರಹ್ಮಕಲಶಾಭಿಷೇಕ ನಡೆಯುತ್ತಿದೆ. ಈ ಸಂಭ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ.

ಇಂದು ಬುಧವಾರ ಬೆಳಗ್ಗೆ ಮೀನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕ. ಮಹಾಪೂಜೆ, ಮಧ್ಯಾಹ್ನ 12 ಗಂಟೆಗೆ ಪಲ್ಲಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ ನಡೆಯಿತು.

ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ವೈದಿಕ ವಿಧಿ ವಿಧಾನಗಳು ನಡೆದವು. ವೈಧಿಕ ವಿಧಿ ವಿಧಾನಗಳು ನಡೆಯುತ್ತಿರುವುದರಿಂದ ಬೆಳಗ್ಗೆ 10 ಗಂಟೆಯವರೆಗೆ ಭಕ್ತರಿಗೆ ದೇಗುಲ ಪ್ರವೇಶಾವಕಾಶ ನೀಡಲಾಗಿರಲಿಲ್ಲ.

Rajajeshwari  ಕ್ಷೇತ್ರದ ತಂತ್ರಿಗಳಾದ ವೇ ಮೂ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಪೊಳಲಿ ರಾಜರಾಜೇಶ್ವರಿ ದೇವಿಗೆ 501 ಕಲಶಾಭಿಷೇಕ, ದುರ್ಗಾಪರಮೇಶ್ವರಿ ದೇವಿಗೆ 501 ಕಲಶಾಭಿಷೇಕ ಹಾಗೂ ಪರಿವಾರ ದೇವರುಗಳಿಗೆ 108 ಕಲಶಗಳ ಅಭಿಷೇಕ ನಡೆಯಿತು.

ಇಂದು ರಾತ್ರಿ ಶ್ರೀ ಕ್ಷೇತ್ರದಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಅರ್ಕುಳ ಶ್ರೀ ಉಳ್ಳಾಕ್ಲು ದೈವಗಳ ನೇಮ ನಡೆಯಲಿದೆ. ಜತೆಗೆ ಅರ್ಧ ಶತಮಾನಕ್ಕೂ ಅಧಿಕ ಕಾಲದ ಬಳಿಕ ಇದೇ ಮೊದಲ ಬಾರಿಗೆ ನಡೆಯುವ ಮಗೃಂತಾಯಿ ದೈವದ ನೇಮ ನಡೆಯಲಿದೆ .

Rajajeshwari

Rajajeshwari

Rajajeshwari

Rajajeshwari

Rajajeshwari

Rajajeshwari

Rajajeshwari

Rajajeshwari

Rajajeshwari

Rajajeshwari

Rajajeshwari

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English