ಮಂಗಳೂರು : ಲೋಕಸಭಾ ಚುನಾವಣೆಯ ಈ ಸಂಧರ್ಭದಲ್ಲಿ ಮಂಗಳವಾರ ಚುನಾವಣೆ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಂಗಳೂರಿನ ಅತ್ತಾವರ ವಾರ್ಡಿನ ಹಲವು ಬಿಜೆಪಿ ಕಾರ್ಯಕರ್ತರು ಅಕ್ಷಯ್ ಕುಮಾರ್‌ರವರ ನೇತೃತ್ವದಲ್ಲಿ ದಕ್ಷಿಣ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂರವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು .
ಅತ್ತಾವರ ಬಾಬುಗುಡ್ಡೆ ಪ್ರದೇಶದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಹಲವರು ಬಿಜೆಪಿ ದ್ವಂದ್ವ ನೀತಿ ಧೋರಣೆಗಳಿಂದ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಅಕ್ಬರ್ ಆಲೀಂ, ಮಾಜಿ ಮೂಡಾ ಅಧ್ಯಕ್ಷ ತೇಜೋಮಯ, ಮಾಜಿ ಮೇಯರ್ ಮಹಾಬಲ ಮಾರ್ಲ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಕೆ.ಸುಧೀರ್, ಯುವ ಕಾಂಗ್ರೆಸ್ ಅಧ್ಯಕ್ಷ ಮೆರಿಲ್ ರೇಗೋ, ರಾಜ್ಯ ಕಾರ್ಯದರ್ಶಿ ಸುಹೈಲ್ ಕಂದಕ್, ರಾಜ್ಯ ಎಸ್.ಸಿ/ಎಸ್.ಟಿ ಘಟಕ ಸಹಸಂಚಾಲಕ ಹೊನ್ನಯ್ಯ, ವಾರ್ಡ ಅಧ್ಯಕ್ಷ ಜಯಂತ್ ಪೂಜಾರಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ರಮಾನಂದ ಪೂಜಾರಿ, ಮಾಜಿ ಕಾರ್ಪೋರೇಟರ್ ಭಾಸ್ಕರ್ ರಾವ್ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English