ಬೆಂಗಳೂರು : ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಇನ್ನು ಒಂದು ವಾರದಲ್ಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಸೋಮವಾರ ಮತ್ತೊಮ್ಮೆ ಹೇಳಿದ್ದಾರೆ. ಸುಮಾರು 21 ಖಾತೆಗಳ ಹೊರೆಯನ್ನು ಹೊಂದಿರುವ ಅವರು ಖಾತೆ ಹಂಚಿಕೆಯ ಮೂಲಕ ತಮ್ಮ ಮೇಲಿರುವ ಜವಾಬ್ದಾರಿಯನ್ನು ಕಡಿಮೆ ಮಾಡಲು ಮುಂದಾಗಿದ್ದಾರೆ.
ಸಂಪುಟ ಪುನಾರಚನೆ, ಖಾತೆ ಹಂಚಿಕೆ ಸಂಬಂಧ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ ವಿಸ್ತರಿಸುವುದಾಗಿ ಸಿಎಂ ವಿಶ್ವಾಸದಿಂದ ಹೇಳಿದ್ದಾರೆ.
ಸುಮಾರು 21 ಖಾತೆಗಳ ಭಾರ ಹೊರುವುದು ಸುಲಭವಲ್ಲ. ಎಲ್ಲ ಖಾತೆಗಳಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ ಅನಿವಾರ್ಯ ಎಂದರು.
ಸಂಪುಟ ವಿಸ್ತರಣೆಯಲ್ಲಿ ಯಾವುದೇ ರಾಜಕೀಯ ಇಲ್ಲ, ಪ್ರಕರಣ, ಕೋರ್ಟ್ ತೀರ್ಪು ಅವುಗಳನ್ನೆಲ್ಲ ತಳಕು ಹಾಕಬೇಡಿ ಎಂದ ಮುಖ್ಯಮಂತ್ರಿಗಳು, ನಮ್ಮದೂ ಕೂಡ ರಾಷ್ಟ್ರೀಯ ಪಕ್ಷ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಸಮಯ ಬೇಕಾಗುತ್ತದೆ ಎಂದು ಹೇಳಿದರು.
ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರು ವಿದೇಶಕ್ಕೆ ತೆರಳಿರುವುದರಿಂದ ಸಂಪುಟ ವಿಸ್ತರಣೆ ಸಾಧ್ಯತೆ ಕಡಿಮೆ ಎಂದು ವಿಶ್ಲೇಷಿಸಲಾಗುತ್ತಿದೆ.
Click this button or press Ctrl+G to toggle between Kannada and English