ಮಂಗಳೂರು : ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ ವಳಚ್ಚಿಲ್ ಹಾಗೂ ಎಸ್‌ವಿಇಇಪಿ ಸಮಿತಿಯ ಸಹಯೋಗದೊಂದಿಗೆ ವಿದ್ಯಾರ್ಥಿ ಸಮುದಾಯಕ್ಕೆ ಹಾಗೂ ಜನ ಸಾಮಾನ್ಯರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಲ್ಲಿ ಮಾನವ ಸರಪಳಿ ಹಾಗೂ ಜಾಥಾ ಕಾರ್ಯಕ್ರಮವನ್ನು ವಳಚ್ಚಿಲ್ ನಲ್ಲಿ ಹಮ್ಮಿಕೊಳ್ಳಲಾಯಿತು.
ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರುಗಳು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು. ಕಾಲೇಜಿನ ಸ್ವೀಪ್ ಘಟಕದ ಸಂಯೋಜಕರಾದ ಡಾ| ಅನಂತ ಕುಲಕರ್ಣಿಯವರು ಸ್ವಾಗತಿಸಿದರು. ಬಲವಾದ ಪ್ರಜಾಪ್ರಭುತ್ವದ ಸ್ಥಾಪನೆಗಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಬೇಕೆಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಂಶುಪಾಲರಾದ ಡಾ| ಶಿವಕುಮಾರ್ ಜಿ.ಎಸ್. ತಿಳಿಸಿದರು. ಎನ್.ಎಸ್.ಎಸ್. ಘಟಕದ ಸಂಯೋಜಕರಾದ ಪ್ರೊ| ರಾಕೇಶ್ ಮಲ್ಯ ವಂದಿಸಿದರು. ನಂತರ ವಿದ್ಯಾರ್ಥಿಗಳು ಗ್ರಾಮದ ಮನೆ ಮನೆಗೆ ತೆರಳಿ ಜನರಲ್ಲಿ ಮತದಾನದ ಬಗ್ಗೆ ಜಾಗ್ರತೆ ಮೂಡಿಸಿದರು.
Click this button or press Ctrl+G to toggle between Kannada and English