- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಲಂಚ ಪಡೆಯುತ್ತಿದ್ದಾಗ ಗ್ರಾಮ ಕರಣಿಕ ಎಸಿಬಿ ಬಲೆಗೆ

VA [1]ಬೆಳ್ತಂಗಡಿ : ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಕರಣಿಕ ಮತ್ತು ಆತನ ಸಹಾಯಕ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆಬೆಳ್ತಂಗಡಿ ಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕು ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದ ಕಡಿರುದ್ಯಾವರ- ಮಿತ್ತಬಾಗಿಲು ಗ್ರಾಮ ಕರಣಿಕ ಮತ್ತು ಸಹಾಯಕ ಭ್ರಷ್ಟಾಚಾರ ನಿಗ್ರಹ ದಳ ಬಲೆಗೆ ಬಿದ್ದಿದ್ದಾರೆ.

ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಗ್ರಾಮ ಕರಣಿಕ ಮಂಜುನಾಥ್ ಮತ್ತು ಸಹಾಯಕ ರಮೇಶ್ ನಾಯ್ಕ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಆರ್.ಟಿ.ಸಿ ಯೊಂದರ ಹೆಸರು ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇವರಿಬ್ಬರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಮಿತ್ತಬಾಗಿಲು ನಿವಾಸಿ ಸಾಮಾಜಿಕ ಕಾರ್ಯಕರ್ತ ಪ್ರದೀಪ್ ಗೌಡ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಆರ್.ಟಿ.ಸಿ. ಹೆಸರು ಬದಲಾವಣೆಗೆ ವಿ ಎ ಮಂಜುನಾಥ್ ಮತ್ತು ಸಹಾಯಕ ರಮೇಶ್ ನಾಯ್ಕ್ 5 ಸಾವಿರ ರಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಅದರಂತೆ ಈ ಹಿಂದ ಪ್ರದೀಪ್‌ ಅವರಿಂದ ರಮೇಶ್ ನಾಯ್ಕ್ ಎರಡು ಸಾವಿರ ರೂಪಾಯಿ ಪಡೆದಿದ್ದ ಎಂದು ಹೇಳಲಾಗಿದೆ. ಇಂದು ಎಸಿಬಿ ಅಧಿಕಾರಿಗಳ ಸೂಚನೆಯಂತೆ ಇಂದು ಬೆಳಗ್ಗೆ ಮತ್ತೆ3000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಈ ಇಬ್ಬರನ್ನು ಬಂಧಿಸಿದ್ದಾರೆ.