ಮಂಗಳೂರು : ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಬುಧವಾರ ಹಲವೆಡೆ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಶೀಘ್ರದಲ್ಲಿ ಮಳೆ ಬಂದು ನಗರದ ಜನತೆಯ ಸಂಕಷ್ಟ ಬಗೆ ಹರಿಯಲು ದೇವರು ಅನುಗ್ರಹಿಸಬೇಕು ಎಂದು ಶಾಸಕ ಡಿ ವೇದವ್ಯಾಸ ಕಾಮತ್ ಮಂಗಳಾದೇವಿ ದೇವಸ್ಥಾನದಲ್ಲಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.
ಮಧ್ಯಾಹ್ನದ ಮಹಾಪೂಜೆಯಲ್ಲಿ ಭಾಗ ವಹಿಸಿದ ಶಾಸಕ ಕಾಮತ್ ಮತ್ತು ಭಕ್ತಜನರು ದೇವರಲ್ಲಿ ಶೀಘ್ರ ಮಳೆಗಾಗಿ ಪ್ರಾರ್ಥಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕರು, ಸಂಕ್ರಮಣದ ಈ ಪರ್ವದಿನದಂದು ನಗ ರದ ಎಲ್ಲ ದೇವಸ್ಥಾನಗಳಲ್ಲಿ ಭಜ ಕರು, ಆಡಳಿತ ಮಂಡಳಿ ಸದಸ್ಯರು, ಪಕ್ಷದ ಕಾರ್ಯ ಕರ್ತರು ಮಳೆಗಾಗಿ ದೇವ ರಲ್ಲಿ ವಿಶೇಷವಾಗಿ ಪ್ರಾರ್ಥಿಸಿದ್ದೇವೆ. ಮಂಗ ಳೂರಿಗೆ ಹೆಸರು ಬರಲು ಕಾರಣವಾಗಿರುವ ಮಂಗಳಾಂಬೆಯ ಸನ್ನಿಧಿಯಲ್ಲಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ಹಿಂದೆ ಈ ರೀತಿ ನೀರಿನ ಕೊರತೆ ಉಂಟಾದಾಗ ನಮ್ಮ ಹಿರಿಯರು ದೇವರನ್ನು ಪ್ರಾರ್ಥಿಸಿದಾಗ ಮಳೆ ಬಂದು ತೊಂದರೆಗಳು ದೂರವಾ ಗಿದ್ದವು ಎನ್ನುವುದು ನಮಗೆ ಗೊತ್ತೆ ಇದೆ. ಈಗ ಮಳೆಯಿಲ್ಲದೆ ನಾವು ಪಡುತಿರುವ ಸಂಕಟವನ್ನು ದೇವಿಯ ಮುಂದೆ ಹೇಳಿಕೊಂಡಿದ್ದೇವೆ. ದೇವಿ ಕಾಪಾಡುತ್ತಾಳೆ ಎನ್ನುವ ನಂಬಿಕೆ ಇದೆ ಎಂದರು.
ಪಾಲಿಕೆ ಮಾಜಿ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರಾದ ವಸಂತ ಜೆ. ಪೂಜಾರಿ, ಪ್ರಭಾಮಾಲಿನಿ, ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ, ಉಪಸ್ಥಿತರಿದ್ದರು.
ಶೀಘ್ರ ಮಳೆ ಬಂದು ನಗರದ ಜನತೆಯ ನೀರಿನ ಸಂಕಷ್ಟ ಬಗೆಹರಿಸುವಂತೆ ದೇವರು ಅನುಗ್ರಹಿಸಬೇಕು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಧ್ಯಾಹ್ನ ದೇಗುಲಕ್ಕೆ ಆಗಮಿಸಿದ ಶಾಸಕರು ಭಕ್ತವೃಂದದೊಂದಿಗೆ ಮಹಾಪೂಜೆಯಲ್ಲಿ ಭಾಗವಹಿಸಿ ಅನಂತರ ಪ್ರಸಾದ ಸ್ವೀಕರಿಸಿದರು.
ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಪ್ರಮುಖರಾದ ರವಿಶಂಕರ್ ಮಿಜಾರ್, ಮಧುಕರ್, ದಿನಕರ್ ಶೆಟ್ಟಿ, ಮನಪಾ ಮಾಜಿ ಸದಸ್ಯರಾದ ರಾಜೇಂದ್ರ, ವಿಜಯಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರಾದ ವಸಂತ ಜೆ. ಪೂಜಾರಿ, ಪ್ರಭಾಮಾಲಿನಿ, ಕಾರ್ಯಕರ್ತರು, ಭಕ್ತರು ಉಪಸ್ಥಿತರಿದ್ದರು.
ಕುಡಿಯುವ ನೀರಿನ ಕೊರತೆ ಶೀಘ್ರ ಬಗೆಹರಿಯಲಿ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಕಂಕನಾಡಿಯಲ್ಲಿರುವ ಶ್ರೀ ಬ್ರಹ್ಮಬೈದರ್ಕಳ ಗರೋಡಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಕ್ಷೇತ್ರದ ಅಧ್ಯಕ್ಷ ಕೇಶವ ಅಂಗಡಿಮಾರ್, ಕೆ. ಚಿತ್ತರಂಜನ್, ಜೆ. ಕಿಶೋರ್ ಕುಮಾರ್, ಸುರೇಂದ್ರನಾಥ, ಉಮೇಶ್ ಸಾಲ್ಯಾನ್, ಬಿ. ವಿಟuಲ, ಪಾಲಿಕೆ ಮಾಜಿ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ವಿಜಯಕುಮಾರ್ ಶೆಟ್ಟಿ, ಸುರೇಂದ್ರ, ಬಿಜೆಪಿ ಮುಖಂಡರಾದ ವಸಂತ ಜೆ ಪೂಜಾರಿ, ಪ್ರಭಾಮಾಲಿನಿ, ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ, ಸಂದೀಪ್ ಎಕ್ಕೂರು, ಸುರೇಶ್ ನಾಯಕ್, ಸಂದೀಪ್ ಗರೋಡಿ, ಕಾರ್ಯಕರ್ತರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English