- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

 

dharmasthala [1]ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು, ವಾಹನ ಚಾಲಕರು ಮತ್ತು ಮಾಲಕರು, ಊರಿನವರು, ಗ್ರಾಮ ಪಂಚಾಯಿತಿ, ಕೆ.ಎಸ್.ಆರ್.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಜನರು ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ ಬೆಳಿಗ್ಗೆ ಗಂಟೆ 6.30 ರಿಂದ 9 ರ ವರೆಗೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು.

ನದಿಯಲ್ಲಿ ಪ್ರವಾಸಿಗರು ಬಿಸಾಡಿದ ಬಟ್ಟೆ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ ಲಾರಿಗಳಲ್ಲಿ ಸಾಗಿಸಲಾಯಿತು.

ಮಾಧ್ಯಮದವರೊಂದಿಗೆ ಮಾತನಾಡಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಸ್ವಚ್ಛತೆ ಬಗ್ಗೆ ಜನರಿಗೆ ಅರಿವು, ಜಾಗೃತಿ ಮೂಡಿಸುವುದು ಬಹಳ ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಪರಿಕಲ್ಪನೆ ಪರಿಣಾಮಕಾರಿಯಾಗಿದ್ದು ದೇಶದಲ್ಲಿ ಶೇ. ೫೦ ರಷ್ಟು ಯಶಸ್ವಿಯಾಗಿದೆ. ಪ್ರತಿ ಮನೆಯಲ್ಲಿಯೂ ಈ ಭಾವನೆ ಮೂಡಿ ಬರಬೇಕು ಎಂದು ಅವರು ಹಾರೈಸಿದರು.

ಹೊರ ರಾಜ್ಯಗಳಿಂದ ಧರ್ಮಸ್ಥಳಕ್ಕೆ ಬರುವವರಿಗೆ ಸ್ವಚ್ಛತೆ ಬಗ್ಯೆ ಪ್ರಜ್ಞೆ ಕಡಿಮೆ ಇದೆ. ಈಗಾಗಲೇ ಕೊಂಚ ಬದಲಾವಣೆಯಾಗಿದೆ. ಸತತ ಪ್ರಯತ್ನದಿಂದ ಜನ ಜೀವನದಲ್ಲಿ ಇನ್ನಷ್ಟು ಬದಲಾವಣೆಯಾಗಬೇಕಾಗಿದೆ ಎಂದು ಅವರು ಆಶಿಸಿದರು.

ಊರಿನವರು ಮತ್ತು ಧರ್ಮಸ್ಥಳದ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಉತ್ಸಾಹದಿಂದ ಭಾಗವಹಿಸಿರುವುದು ಸಂತೋಷವಾಗಿದೆ. ಎಲ್ಲರಿಗೂ ದೇವರ ಆಶೀರ್ವಾದ ಇರಲಿ ಎಂದು ಹೆಗ್ಗಡೆಯವರು ಹಾರೈಸಿದರು.

Harshendra [2]