ಬೈಯಪ್ಪನ ಹಳ್ಳಿಯಲ್ಲಿ ಗಿರೀಶ್ ಕಾರ್ನಾಡ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ

3:28 PM, Monday, June 10th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Girish karnad ಬೆಂಗಳೂರು : ಬೆಂಗಳೂರು, ಜೂನ್ 10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ,ಕನ್ನಡದ ಮೇರು ನಾಟಕಕಾರ, ಹಿರಿಯ ಸಾಹಿತಿ, ಗಿರೀಶ್ ಕಾರ್ನಾಡ್(81) ವಿಧಿವಶರಾಗಿದ್ದಾರೆ.

ಬೆಂಗಳೂರಿನ ಲ್ಯಾವಲ್ಲೆರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಕೆಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

ಗಿರೀಶ್ ಕಾರ್ನಾಡ್‌ ಅವರು 1938ರ ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದುಕೊ೦ಡರು. ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ 5 ವರ್ಷದ ಮಗ ವಸಂತನ ತಾಯಿ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೈಯಪ್ಪನಹಳ್ಳಿಯ ಮುಖ್ಯರಸ್ತೆ ಸಮೀಪ ಇರುವ ಕಲ್ಲಹಳ್ಳಿ ವಿದ್ಯುತ್ ಚಿತಾಗಾರದಲ್ಲೇ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ 3ಗಂಟೆವರೆಗೆ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಗಿರೀಶ್ ಕಾರ್ನಾಡ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಿದ್ದು, ಮೂರು ದಿನಗಳ ಕಾಲ ಶೋಕಾಚರಣೆ ನಡೆಯಲಿದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾರ್ವಜನಿಕರು ಅಂತಿಮ ದರ್ಶನ ಪಡೆದ ನಂತರ ಯಾವುದೇ ವಿಧಿವಿಧಾನಗಳಿಲ್ಲದೆ ಕಾರ್ನಾಡ್ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಈಗಾಗಲೇ ಸಾಹಿತಿಗಳು, ಗಣ್ಯರು ಸೇರಿದಂತೆ ನೂರಾರು ಜನರು ಕಾರ್ನಾಡ್ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಗಿರೀಶ್ ಕಾರ್ನಾಡ್ ಅವರು ಎಲ್ಲಾ ಭಾಷೆಗಳಲ್ಲಿಯೂ ಅಭಿನಯಿಸಿದ ಬಹುಮುಖ ಪ್ರತಿಭೆಯ ಕಲಾವಿದ. ನಿಷ್ಠುರವಾದಿ, ಖ್ಯಾತ ಸಾಹಿತಿಯಾಗಿ ಜನಾನುರಾಗಿಯಾಗಿದ್ದರು. ಆಕಸ್ಮಿಕ ನಿಧನದಿಂದ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ನಾಡಿನ ಸಾರಸ್ವತ ಕುಟುಂಬದವರಾದ ನಾಡಿನ ಹಿರಿಯ ಸಾಹಿತಿ, ರಂಗಭೂಮಿ ಹಾಗೂ ಸಿನಿಮಾ ನಟ, ದಿಗ್ದರ್ಶಕ ’ಜ್ಞಾನ ಪೀಠ ಪ್ರಶಸ್ತಿ’ ಪುರಸ್ಕೃತ ಡಾ. ಗಿರೀಶ್ ಕಾರ್ನಾಡ್ ನಿಧನಕ್ಕೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಸಹಿತ ಅನೇಕ ಪ್ರಮುಖರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English