ಮಂಗಳೂರು: ಲಾರಿ ಡಿಕ್ಕಿ, ಬೈಕ್ ಸವಾರ‌ ಸ್ಥಳದಲ್ಲೇ ಮೃತ

2:15 PM, Tuesday, June 11th, 2019
Share
1 Star2 Stars3 Stars4 Stars5 Stars
(No Ratings Yet)
Loading...

sidiq ಮಂಗಳೂರು: ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ, ನಗರದ ಹೊರವಲಯದ ಎಕ್ಕೂರು ಬಳಿ ಸೋಮವಾರ ಸಂಜೆ ಸಂಭವಿಸಿದೆ.

ಕುತ್ತಾರು ಮದನಿ ನಗರ ನಿವಾಸಿ ಸಿದ್ದೀಕ್ ಮೃತ ಬೈಕ್ ಸವಾರ‌. ಈತ ಬೈಕ್ನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಲ್ಲಿ ಬರುತ್ತಿದ್ದ ಲಾರಿಯೊಂದು ಎಕ್ಕೂರಿನ ಕೇಂದ್ರೀಯ ವಿದ್ಯಾಲಯದ ಬಳಿ, ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸಿದ್ದೀಕ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟದ್ದಾನೆ.

ಸ್ಥಳಕ್ಕೆ ದಕ್ಷಿಣ ಠಾಣೆಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English