- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಡಬದಲ್ಲಿ ಸರಣಿ ಅಪಘಾತ, ಆರು ಮಂದಿಗೆ ಗಾಯ

kadaba-accident [1]ಉಪ್ಪಿನಂಗಡಿ : ಕಡಬದ ಹಳೇಸ್ಟೇಷನ್ ಸಮೀಪದ ತಿರುವಿನಲ್ಲಿ ಲಾರಿ, ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಆರು ಮಂದಿ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ .

ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಕಾರು, ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು, ದ್ವಿಚಕ್ರ ವಾಹನ ಸವಾರರೂ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಬಳ್ಳಾರಿ ಮೂಲದವರೆಂದು ಗುರುತಿಸಲಾಗಿದ್ದು, ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದಾರೆ.