ಮಂಗಳೂರು : ಮಂಗಳೂರಿನ ಸರಕಾರಿ ಆಸ್ಪತ್ರೆ ವೆನ್ಲಾಕ್‌ನಲ್ಲಿ ಬಡ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ತೋರಿಸುತ್ತಿರುವ ಸಿಬ್ಬಂದಿಗಳ ವೈದ್ಯರ ವಿಚಾರವನ್ನು ಸಾಮಾಜಿಕ ಜಾಲ ತಾಣದ ಮೂಲಕ ಸಾರ್ವಜನಿಕರಿಗೆ ತಿಳಿಸುವ ಕೆಲಸ ಮಾಡಿದ ಶ್ರೀರಾಮ ಸೇನೆಯ ಕಾರ್ಯಕರ್ತರನ್ನು ಬಂಧಿಸಿ ಹಿಂಸೆ ನೀಡಿದುದರ ವಿರುದ್ಧ ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಶ್ರೀರಾಮ ಸೇನೆಯ ಮುಖಂಡರು, ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ರಾಜೇಶ್ವರಿಯವರನ್ನು ಕೂಡಲೇ ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು. ಗಾಯಾಳುವಿನ ಬಗ್ಗೆ ಸಿಬ್ಬಂದಿಗಳು ಎಚ್ಚರಿಕೆ ವಹಿಸದೇ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಆರೋಪಿಸಲಾಯಿತು.
ಆಸ್ಪತ್ರೆಯ ಅವ್ಯವಸ್ಥೆ ಹಾಗೂ ಅಧೀಕ್ಷಕಿ ಅಮಾನತಿಗೆ ಆಗ್ರಹಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕೆಲವು ದಿನಗಳ ಹಿಂದೆ ನಡೆದ ಅಪಘಾತವೊಂದರಲ್ಲಿ ಗಾಯಗೊಂಡ ವ್ಯಕ್ತಿಯನ್ನು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರಾಗಲಿ ಅಲ್ಲಿನ ಸಿಬ್ಬಂದಿಗಳಾಗಲಿ ಯಾವುದೇ ನಿಗಾ ವಹಿಸಲಿಲ್ಲ. ಈ ವಿಚಾರವನ್ನು ಸಾಮಾಜಿಕ ಜಾಲ ತಾಣದ ಮೂಲಕ ಸಾರ್ವಜನಿಕರಿಗೆ ತಿಳಿಸುವ ಕೆಲಸ ಮಾಡಿದ ಸಂಘಟನೆಯ ಕಾರ್ಯಕರ್ತರ ವಿರುದ್ಧ ದೂರು ನೀಡಿ ಜೈಲಿಗಟ್ಟಿರುವ ಕ್ರಮ ಸರಿಯಲ್ಲ ಎಂದರು.
Click this button or press Ctrl+G to toggle between Kannada and English