ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ 15.34 ಲಕ್ಷ ರೂ ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಜೂನ್ 23 ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಸ್ಪೈಸ್ ಜೆಟ್ ವಿಮಾನದ ಪ್ರಯಾಣಿಕನಿಂದ ರೂ 7.17 ಲಕ್ಷ ರೂ ಮೌಲ್ಯದ 211 ಗ್ರಾಂ ಚಿನ್ನ ವಶಪಡಿಸಿಕೊಂಡು ಪ್ರಯಾಣಿಕನನ್ನು ಬಂಧಿಸಲಾಗಿದೆ.
ಆರೋಪಿಯು ಚಿನ್ನವನ್ನು ಗೇರ್ ವೀಲ್ನಲ್ಲಿ ಅಡಗಿಸಿಟ್ಟು ತಂದಿದ್ದು, ಬ್ಯಾಗ್ ತಪಾಸಣೆ ವೇಳೆ ಸಿಕ್ಕಿ ಬಿದ್ದಿದ್ದಾನೆ.
ಇನ್ನು ಜೂನ್ 24 ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದ ಪ್ರಯಾಣಿಕೆಯೋರ್ವಳಿಂದ 8.16 ಲಕ್ಷ ರೂ ಮೌಲ್ಯದ 239.860 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡು ಆಕೆಯನ್ನು ಬಂಧಿಸಲಾಗಿದೆ. ಈಕೆ ಬುರ್ಕಾದೊಳಗೆ ಮೂರು ಚೈನ್ ಮತ್ತು ನಾಲ್ಕು ಬಳೆಯನ್ನು ಧರಿಸಿ ಅಕ್ರಮವಾಗಿ ಚಿನ್ನವನ್ನು ತಂದಿದ್ದಳು. ತಪಾಸಣೆ ವೇಳೆ ಇದನ್ನು ಪತ್ತೆ ಹಚ್ಚಿದ ಮಂಗಳೂರು ಕಸ್ಟಮ್ ಅಧಿಕಾರಿಗಳು ಈಕೆಯನ್ನು ಬಂಧಿಸಿದ್ದಾರೆ.
Click this button or press Ctrl+G to toggle between Kannada and English