ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯೊಂದಿಗೆ 1982 ರಲ್ಲಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಆರಂಭಗೊಂಡ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಇಂದು ರಾಜ್ಯದೆಲ್ಲೆಡೆ ವಿಸ್ತರಿಸಿದೆ. ಜನಪರ ಚಳವಳಿಯಾಗಿ ಪ್ರತಿ ಮನೆಗೂ ಯೋಜನೆ ತಲುಪಿದೆ. ಜನರಎಲ್ಲಾ ಬೇಡಿಕೆಗಳನ್ನು ಪೂರೈಸಿ ಜೀವನ ಮಟ್ಟ ಸುಧಾರಣೆಯೊಂದಿಗೆ ಸ್ವಾವಲಂಬಿಜೀವನಕ್ಕೆಕಾಯಕಲ್ಪ ನೀಡಿದೆಎಂದುಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್.ಮಂಜುನಾಥ್ ಹೇಳಿದರು.
ಅವರು ಮಂಗಳವಾರ ಗುರುವಾಯನಕೆರೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಪ್ರಾಮಾಣಿಕತೆ ಮತ್ತು ಸೇವಾ ಕಳಕಳಿ ಹಾಗೂ ಫಲಾನುಭವಿಗಳ ನಿರಂತರ ಪರಿಶ್ರಮ ಮತ್ತು ಪ್ರಯತ್ನವೇಯೋಜನೆಯ ಯಶಸ್ವಿನ ಗುಟ್ಟುಎಂದು ಅವರು ಅಭಿಪ್ರಾಯ ಪಟ್ಟರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೋಜನೆಯ ಸ್ವ-ಸಹಾಯ ಸಂಘಗಳು ವಾರ್ಷಿಕ 1400 ಕೋಟಿ ರೂ. ವ್ಯವಹಾರ ನಡೆಸುತ್ತಿವೆ. ಬೆಳ್ತಂಗಡಿ ತಾಲ್ಲೂಕಿನಲ್ಲಿ 4200 ಪ್ರಗತಿ ಬಂಧು ಒಕ್ಕೂಟಗಳಿದ್ದು 1700 ಸ್ವ-ಸಹಾಯ ಸಂಘದ ಕುಟುಂಬಗಳು ಫಲಾನುಭವಿಗಳಾಗಿ ಪ್ರಗತಿಯ ಪಾಲುದಾರರಾಗಿದ್ದಾರೆ.
ಶೇ.ನೂರು ಸಾಲ ವಸೂಲಾತಿಯೋಜನೆಯ ಪ್ರಮುಖ ಹಂತವಾಗಿದೆ. ಬಡವರ ಆಶಾಕಿರಣವಾದ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಉದ್ಯೋಗ ಹಾಗೂ ಸ್ವ-ಉದ್ಯೋಗಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿಯಾಗಿದೆ. ಯೋಜನೆಯ ಸುಸ್ಥಿರತೆ, ಯಶಸ್ಸು ಮತ್ತು ಸಾಧನೆಗೆ ಎಲ್ಲಾ ಫಲಾನುಭವಿಗಳು ಕೂಡಾ ಸಮಾನ ಪಾಲುದಾರರಾಗಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕುವೆಟ್ಟು ಗ್ರಾಮ ಪಂಚಾಯಿತಿಅಧ್ಯಕ್ಷಅಶೋಕ್‌ಕೋಟ್ಯಾನ್‌ಅಧ್ಯಕ್ಷತೆ ವಹಿಸಿದರು.ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಎಂ ಶೆಟ್ಟಿ, ಕೆ.ವಸಂತ ಸಾಲಿಯಾನ್, ಸಿಂಡಿಕೇಟ್ ಬ್ಯಾಂಕಿನ ಪ್ರಬಂಧಕಸುಜಿತ್, ಪ್ರಭಾಕರ ಪೊಸಂದೋಡಿ ಬೆಳ್ತಂಗಡಿ ತಾಲ್ಲೂಕುಜನಜಾಗೃತಿ ವೇದಿಕೆಯ ಅಧ್ಯಕ್ಷೆ ಶಾರದಾ ಆರ್.ರೈ ಮತ್ತು ಪ್ರಾದೇಶಿಕ ನಿರ್ದೇಶಕ ಕೆ. ಮಹಾವೀರ ಅಜ್ರಿ ಉಪಸ್ಥಿತರಿದ್ದರು.
ಗ್ರಾಮಾಭಿವೃದ್ಧಿ ಯೋಜನೆಯ ದ.ಕ.ಜಿಲ್ಲಾ ಯೋಜನಾಧಿಕಾರಿ ಸತೀಶ್ ಶೆಟ್ಟಿ ಸ್ವಾಗತಿಸಿದರು. ತಾಲ್ಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ ಧನ್ಯವಾದವಿತ್ತರು. ಯಶವಂತ್, ಎಸ್. ಕಾರ್ಯಕ್ರಮ ನಿರ್ವಹಿಸಿದರು.
Click this button or press Ctrl+G to toggle between Kannada and English