ಕ್ರಿಕೆಟ್ ಬೆಟ್ಟಿಂಗ್ ‌ನಲ್ಲಿ ತೊಡಗಿಸಿಕೊಂಡಿದ್ದ ನಾಲ್ವರ ಬಂಧನ 54 ಲಕ್ಷ ರೂಪಾಯಿ ವಶ

8:21 PM, Tuesday, June 25th, 2019
Share
1 Star2 Stars3 Stars4 Stars5 Stars
(No Ratings Yet)
Loading...

cricket-bettingಮಂಗಳೂರು : ಕ್ರಿಕೆಟ್ ಬೆಟ್ಟಿಂಗ್ ‌ನಲ್ಲಿ ತೊಡಗಿಸಿಕೊಂಡಿದ್ದ ನಾಲ್ವರನ್ನು ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಸೋಮವಾರ ರಾತ್ರಿ ಬಂಧಿಸಿದ್ದಾರೆ.

ಬೆಟ್ಟಿಂಗ್ ನಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 4 ಮಂದಿ ಕ್ರಿಕೆಟ್ ಬುಕ್ಕಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 54 ಲಕ್ಷ ರೂಪಾಯಿ ನಗದು ಹಾಗು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದ ಪ್ರಮುಖ ಆರೋಪಿ ಕರುಣಾಕರ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ಹೊರಗಿನಿಂದ ನಡೆಸುತ್ತಿದ್ದಾನೆ ಎನ್ನಲಾಗಿದ್ದು, ತಲೆಮರೆಸಿಕೊಂಡಿರುವ ಆತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English