ರಾಮನಗರ: ಬಾಂಗ್ಲಾದೇಶದ ನಿಷೇಧಿತ ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್(ಜೆಎಂಬಿ) ಸಂಘಟನೆಯ ಶಂಕಿತ ಉಗ್ರ ಎಸ್.ಕೆ. ಹಬಿಬುರ್ ರೆಹಮಾನ್ ಅಲಿಯಾಸ್ ಶೇಖ್ ಮಂಗಳವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಂಧನವಾದ ಬೆನ್ನಲ್ಲೇ ರಾಮನಗರದಲ್ಲಿ ಎರಡು ಸಜೀವ ಬಾಂಬ್ಗಳು ಬುಧವಾರ ಪತ್ತೆಯಾಗಿವೆ. ಈ ಮೂಲಕ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
ರಾಮನಗರದ ಟಿಪ್ಪು ನಗರದ 23ನೇ ವಾರ್ಡ್ನ ಸೇತುವೆ ಬಳಿ ಎನ್ಐಎ, ಗುಪ್ತಚರ ದಳ ಮತ್ತು ಪೊಲೀಸರು ನಡೆಸಿದ ಶೋಧ ಕಾರ್ಯದಲ್ಲಿ ಎರಡು ಸಜೀವ ಬಾಂಬ್ಗಳು ಪತ್ತೆಯಾಗಿವೆ. ಈ ಬೆಳವಣಿಗೆಯ ನಂತರ ಸಾರ್ವಜನಿಕರಲ್ಲಿ ಆತಂಕ ಸೃಷ್ಠಿಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಮನಗರದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಬಾಂಬ್ ಪತ್ತೆಯಾದ ಸುತ್ತಮುತ್ತಲ್ಲಿನ ಸ್ಥಳಗಳಲ್ಲಿ ಮತ್ತಷ್ಟು ಬಾಂಬ್ ಇಟ್ಟಿರಬಹುದು ಎಂದು ಶಂಕಿಸಿ ಗುಪ್ತಚರ ದಳ ತೀವ್ರ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದೆ.
ಎನ್ಐಎ ತಂಡ ಬಂಧಿತ ಶಂಕಿತ ಉಗ್ರ ಹಬಿಬುರ್ ರೆಹಮಾನ್ (30) ಅನ್ನು ವಿಚಾರಣೆಗೆ ಒಳಪಡಿಸಿದಾಗ ಆತ ರಾಮನಗರದ ಬಳಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಎನ್ಐಎ, ಗುಪ್ತಚರ ದಳ, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು.
Click this button or press Ctrl+G to toggle between Kannada and English