ಪುತ್ತೂರು : ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ವಿಡಿಯೋ ವೈರಲ್

1:50 PM, Wednesday, July 3rd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Abvp-Girl ಪುತ್ತೂರು : ಪುತ್ತೂರು ಕಾಲೇಜಿನ ವಿದ್ಯಾರ್ಥಿನಿ ಯೊಬ್ಬಳಿಗೆ ಗಾಂಜಾ ನೀಡಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಈ ಕುರಿತ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯವಿವೇಕಾನಂದ ಕಾಲೇಜಿನ  ನಾಲ್ವರು ವಿದ್ಯಾರ್ಥಿಗಳು ತಮ್ಮದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು, ಅಮಲು ಬರುವಂತೆ ಮಾಡಿ ಅತ್ಯಾಚಾರ ನಡೆಸಿರುವುದಲ್ಲದೆ, ಈ ಘಟನೆಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲೂ ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ವಿಚಾರ ಇದೀಗ ಕಾಲೇಜು ಆಡಳಿತ ಮಂಡಳಿಯ ಗಮನಕ್ಕೂ ಬಂದಿದ್ದು, ಯಾವ ಕ್ರಮ ಕೈಗೊಳ್ಳಲಾಗುತ್ತದೆ ಕಾದು ನೋಡಬೇಕಿದೆ.

ABVP-Rape ಕೆಲವು ನಿರ್ಬಂಧಿತ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದು ಐಪಿಸಿಯ 354 ಸಿ ಮತ್ತು 66 ಇ, ಐಟಿ ಕಾಯ್ದೆಯ 66 ಎ ಅಡಿಯಲ್ಲಿ ಅಪರಾಧವಾಗಿದದ್ದು, ಪ್ರಸಾರ ಮಾಡಿದವರನ್ನೂ ಆರೋಪಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಒಂದು ಮೂಲದ ಪ್ರಕಾರ ಎಬಿವಿಪಿಯ  ವಿದ್ಯಾರ್ಥಿಗಳು ತಮ್ಮದೇ  ಸದಸ್ಯೆಗೆ ಗಾಂಜಾ ನೀಡಿ ಕಾರಿನಲ್ಲಿ ಅಜ್ಙಾತ ಪ್ರದೇಶಕ್ಕೆ ಒಯ್ದು ಈ ರೀತಿ ಅತ್ಯಾಚಾರ ಮಾಡಿ ಕಾಮತೃಷೆ ತೀರಿಸಿಕೊಂಡ ಕೊಂಡಿದ್ದಾರೆ ಎನ್ನಲಾಗಿದೆ.

ABVP-Rape

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English