ಪಾಪೆಮಜಲು : ಶಾಲಾ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

8:49 PM, Friday, July 5th, 2019
Share
1 Star2 Stars3 Stars4 Stars5 Stars
(No Ratings Yet)
Loading...

Ajithಮಂಗಳೂರು :   ಪುತ್ತೂರು ಹೊರವಲಯದಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿರುವುದು ಶುಕ್ರವಾರ ವರದಿಯಾಗಿದೆ.

ಪುತ್ತೂರು ಸಮೀಪದ ಪಾಪೆಮಜಲು ಎಂಬಲ್ಲಿ ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ಆರೋಪಿಸಲಾಗಿದೆ.

ಸ್ಥಳೀಯ ನಿವಾಸಿ ವಿವಾಹಿತ ಅಜಿತ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಪ್ಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಜಿತ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿ‌ಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯಿಂದ ಮಾಹಿತಿ‌ ಪಡೆದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English