ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಸೋಮಬಾಯಿ ಮೋದಿ ಅವರು ಇಂದು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸೋಮಬಾಯಿ ಮೋದಿ, ದೇವಸ್ಥಾನ ಭೇಟಿ ನೀಡುವ ಸಲುವಾಗಿ ಮಂಗಳೂರಿಗೆ ಆಗಮಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯನ್ನು ಜನ ಮೆಚ್ಚಿಕೊಂಡಿದ್ದಾರೆ. ಅದರಂತೆ ನಾನು ಕೂಡ ಮೋದಿಯನ್ನು ಮೆಚ್ಚಿಕೊಂಡಿದ್ದೇನೆ.
ಧರ್ಮಸ್ಥಳಕ್ಕೆ ಹಾಗೂ ಇತರ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಸಲುವಾಗಿ ಮಾತ್ರ ಜಿಲ್ಲೆಗೆ ಆಗಮಿಸಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದರು.
Click this button or press Ctrl+G to toggle between Kannada and English