ಸುರತ್ಕಲ್ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಅಮಾನತು

3:21 PM, Wednesday, July 10th, 2019
Share
1 Star2 Stars3 Stars4 Stars5 Stars
(No Ratings Yet)
Loading...

Ramakrishnaಮಂಗಳೂರು : ಮಾದಕವಸ್ತು ಪೂರೈಕೆ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಹಾಗೂ ತನ್ನ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣದ ವಿಚಾರದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಮಂಗಳೂರಿನ ಸುರತ್ಕಲ್ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಕೆ.ಕೆ.ರಾಮಕೃಷ್ಣ ಅವರನ್ನು ಅಮಾನತುಗೊಳಿಸಿ ಪೊಲೀಸ್‌ ಕಮಿಷನರ್‌ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನಲ್ಲಿ ಗಾಂಜಾ, ದನಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಮಿಷನರ್‌ ಸಂದೀಪ್ ಪಾಟೀಲ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಆದರೆ ಸುರತ್ಕಲ್ ಠಾಣಾ ಇನ್‌ಸ್ಪೆಕ್ಟರ್ ರಾಮಕೃಷ್ಣ ಅದನ್ನು ಗಂಭೀರವಾಗಿ ಪರಿಗಣಿಸದೆ ಕರ್ತವ್ಯಲೋಪವೆಸಗಿದ್ದರು ಎಂಬ ಆರೋಪವಿದೆ. ಇದು ಮಾತ್ರವಲ್ಲದೆ ಹಣಕಾಸು ಸಂಸ್ಥೆಯೊಂದು ವಂಚನೆ ಮಾಡಿದ ಆರೋಪದಲ್ಲಿ ಸಾರ್ವಜನಿಕರು ಠಾಣೆಗೆ ದೂರು ನೀಡಲು ಬಂದಾಗ ಕೇಸು ದಾಖಲಿಸದೆ ಕಳುಹಿಸಿದ್ದರು. ಇದು ಕಮಿಷನರ್‌ ಅವರ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕ್ರಮಕೈಗೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English