ಮಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಚಿವ ಸಂಪುಟದಲ್ಲಿ ಕರಾವಳಿಗೆ ಎರಡು ಸಚಿವ ಸ್ಥಾನ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹುದ್ದೆ ಲಭ್ಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಶಾಸಕ ಅಂಗಾರ , ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ಸುನಿಲ್ ಕುಮಾರ್ ಅವರ ಹೆಸರು ಮುಂಚೂಣಿಯಲ್ಲಿವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಳಿ ಚರ್ಚಿಸಿದ ಬಳಿಕ ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಿಜೆಪಿಯ ಅಗ್ರಪಂಕ್ತಿಯ ನಾಯಕರಿಗೆ, ಪ್ರಾದೇಶಿಕ ಮತ್ತು ಜಾತಿವಾರು ಪ್ರಾತಿನಿಧ್ಯ ನೀಡಬೇಕಾದ ಸವಾಲು ಪಕ್ಷದ ಮುಂದಿದೆ. ಮುಖ್ಯಮಂತ್ರಿ ಸೇರಿದಂತೆ 34 ಸಂಖ್ಯಾ ಬಲದ ಸಚಿವ ಸಂಪುಟ ರಚನೆಗೆ ಅವಕಾಶವಿದ್ದು, ಇಷ್ಟರಲ್ಲೇ ಸಚಿವ ಸ್ಥಾನಗಳನ್ನು ಹೊಂದಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಎಷ್ಟು ಸ್ಥಾನಗಳು ದೊರೆಯಬಹುದು ಎಂಬುದು ಕುತೂಹಲ ಕಾರ್ಯಕರ್ತರಲ್ಲಿ ಮೂಡಿದೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಯಾಗಿರು ವುದರಿಂದ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಆಯ್ಕೆ ನಡೆಯಬೇಕಾಗಿದೆ. ಸುನಿಲ್ ಕುಮಾರ್ ಅವರ ಹೆಸರಿನ ಜತೆಗೆ ಸಿ.ಟಿ. ರವಿ ಮತ್ತು ನಳಿನ್ ಕುಮಾರ್ ಕಟೀಲು ಅವರ ಹೆಸರುಗಳೂ ಕೇಳಿಬರುತ್ತಿವೆ.
2013ರಲ್ಲಿ ಕಾಂಗ್ರೆಸ್ ಸರಕಾರದ ಅವಧಿ ಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಟ್ಟು 13 ಸ್ಥಾನಗಳಲ್ಲಿ 11 ಸ್ಥಾನಗಳನ್ನು ಕಾಂಗ್ರೆಸ್ ಪಡೆದುಕೊಂಡಿತ್ತು. ಆದಕ್ಕನುಗುಣವಾಗಿ ದಕ್ಷಿಣ ಕನ್ನಡಕ್ಕೆ ಮೂರು ಮತ್ತು ಉಡುಪಿಗೆ ಒಂದು ಸಚಿವ ಸ್ಥಾನ ನೀಡಲಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಎರಡೂ ಜಿಲ್ಲೆಗಳಲ್ಲಿ ಕಾಂಗ್ರೆಸ್ ಒಂದೇ ಸ್ಥಾನವನ್ನು ಗೆದ್ದಿದ್ದರೂ ದೋಸ್ತಿ ಸರಕಾರದಲ್ಲಿ ಒಂದು ಸಚಿವ ಸ್ಥಾನವನ್ನು ನೀಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂಬುದು ಜನಜನಿತ. ಒಟ್ಟು 13 ಸ್ಥಾನಗಳಲ್ಲಿ 12 ಶಾಸಕರು ಬಿಜೆಪಿಯವರೇ. 2 ಲೋಕಸಭಾ ಸ್ಥಾನಗಳೂ ಬಿಜೆಪಿ ಪಾಲಾ ಗಿವೆ. 2013ರಲ್ಲಿ ಕಾಂಗ್ರೆಸ್‌ಗೆ ಸಿಕ್ಕಿದ್ದ ಜನಾ ದೇಶವೇ 2018ರ ಚುನಾವಣೆಯಲ್ಲಿ ಬಿಜೆಪಿಗೆ ಸಿಕ್ಕಿದೆ. ಈ ಪರಿಸ್ಥಿತಿಯಲ್ಲಿ ನೂತನ ಸರಕಾರದಲ್ಲಿ ಇಲ್ಲಿ ಪಕ್ಷ ಪಡೆದಿರುವ
ಸ್ಥಾನಗಳ ಆಧಾರದಲ್ಲಿ ಸಚಿವ ಸಂಪುಟ ಪ್ರಾತಿನಿಧ್ಯ ದೊರಕೀತೆ ಎಂಬುದೀಗ ಚರ್ಚೆಯ ವಸ್ತು
ಸಚಿವ ಸಂಪುಟದಲ್ಲಿ ಕರಾವಳಿಗೆಷ್ಟು ಸ್ಥಾನ ಎಂಬ ಕುತೂಹಲದ ನಡುವೆ 5 ಬಾರಿ ಕುಂದಾಪುರ ಕ್ಷೇತ್ರವನ್ನು ವಿಧಾನಸಭೆಯಲ್ಲಿ ಪ್ರತಿನಿಧಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ತೀವ್ರ ಒತ್ತಾಯ ಕೇಳಿಬರುತ್ತಿದೆ. ಜಾಲತಾಣದಲ್ಲಿ ಆಂದೋಲನ ಮಾದರಿಯಲ್ಲಿ ಒತ್ತಡ ರೂಪುಗೊಳ್ಳುತ್ತಿದೆ. ಉಡುಪಿ ಜಿಲ್ಲೆಯ ಅಷ್ಟೂ ಮಂದಿ ಶಾಸಕರು ಸಚಿವರಾಗಲು ಅರ್ಹರೇ ಆಗಿದ್ದರೂ ಹಾಲಾಡಿಯವರಿಗೇ ಏಕೆ ಕೊಡಬೇಕು ಎಂಬ ಕುರಿತು ಜಾಲತಾಣಿಗರು ಕಾರಣಗಳನ್ನು ನೀಡುತ್ತಿದ್ದಾರೆ.
Click this button or press Ctrl+G to toggle between Kannada and English