ಮುಂದಿನ 48 ಗಂಟೆಗಳಲ್ಲಿ ಬಾರೀ ಮಳೆ ; ಆಗಸ್ಟ್ 7 ರಂದು ಶಾಲಾ ಕಾಲೇಜುಗಳಿಗೆ ರಜೆ

7:47 PM, Tuesday, August 6th, 2019
Share
1 Star2 Stars3 Stars4 Stars5 Stars
(4 rating, 1 votes)
Loading...

Rain ಮಂಗಳೂರು  : ಮುಂದಿನ 48 ಗಂಟೆಗಳಲ್ಲಿ ಬಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) (ಆ.7)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಇಪ್ಪತ್ತನಾಲ್ಕು ಗಂಟೆಯೂ ತುರ್ತು ಸೇವೆಗಾಗಿ 1077 ಟೋಲ್ ಪ್ರೀ  ನಂಬರನ್ನು ಸಂಪರ್ಕಿಸಲು ತಿಳಿಸಲಾಗಿದೆ.

Rain

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English