ಕೆ.ಎಸ್.ಆರ್.ಟಿ.ಸಿ ನಿಲ್ದಾಣದಲ್ಲಿ ಆರೋಗ್ಯ ಜಾಗೃತಿ- ವಸ್ತು ಪ್ರದರ್ಶನ

5:50 PM, Thursday, August 8th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

ksrtc-helthಮಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿವಿಧ ಸಾಂಕ್ರಾಮಿಕ ರೋಗಗಳ ಹಾಗೂ ಆರೋಗ್ಯ ಜಾಗೃತಿ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಮಾಹಿತಿ ಪ್ರದರ್ಶನ ನಗರದ ಲಾಲ್‍ಬಾಣ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್ ಅವರು ಪ್ರದರ್ಶನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾಂಕ್ರಾಮಿಕ ರೋಗಗಳ ನಿಯಂತ್ರಣ ನಮ್ಮಿಂದಲೇ ಸಾಧ್ಯ. ವೈದ್ಯಕೀಯ ಚಿಕಿತ್ಸೆಗಳ ಮೂಲಕ ರೋಗದ ತೀವೃತೆ ಕಡಿಮೆ ಮಾಡಬಹುದಾದರೂ, ರೋಗದ ಮೂಲ ನಿಯಂತ್ರಣ ಮಾನವನ ಕೈಯಲ್ಲಿದೆ. ರೋಗ ಬಂದ ಮೇಲೆ ಅವರ ಚಿಕಿತ್ಸಾ ಅವಧಿಯೂ ಬಹಳ ಪ್ರಾಮುಖ್ಯವಾಗಿದೆ ಎಂದು ಹೇಳಿದರು.

ಮನೆಯಲ್ಲಿ ಸುತ್ತಮುತ್ತ ಪರಿಸರದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಿದರೆ ಬಹುತೇಕ ಸಾಂಕ್ರಾಮಿಕ ರೋಗಗಳ ಪರಿಣಾಮ ಆರಂಭಿಕ ಹಂತದಲ್ಲಯೇ ತಗ್ಗಲಿದೆ ಎಂದು ಹೇಳಿದರು.

ಸಾರಿಗೆ ಬಸ್ ಸಿಬ್ಬಂದಿಗಳು ಒಂದೆಡೆಯಿಂದ ಇನ್ನೊಂದೆಡೆಗೆ ನಿರಂತರ ಸಂಚಾರದಲ್ಲಿರುವುದರಿಂದ ಇವರು ಸಾಂಕ್ರಾಮಿಕ ರೋಗಗಳ ಬಗ್ಗೆ ಹೆಚ್ಚು ಜಾಗೃತಿಯಿಂದ ಇರಬೇಕು ಎಂದು ಡಾ. ರಾಮಕೃಷ್ಣ ರಾವ್ ತಿಳಿಸಿದರು.

ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗೀಯ ನಿಯಂತ್ರಕ ಕೆ.ಎಮ್. ಅಶ್ರಫ್, ವಿಭಾಗೀಯ ಸಂಚಾರ ಅಧಿಕಾರಿ ಜೈಶಾಂತ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಸ್ವಾಗತಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English