ಮಾಜಿ ಸಚಿವ ಬಿ. ರಮಾನಾಥ ರೈ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ

4:52 PM, Saturday, August 10th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Ramanatha-Raiಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ಬಂಟ್ವಾಳ ತಾಲೂಕಿನ ನೆರೆ ಪೀಡಿತ ಪ್ರದೇಶಗಳಾದ ಆಲಡ್ಕ. ಬೋಗೋಡಿ, ನಂದರಬೆಟ್ಟು ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

ನೇತ್ರಾವತಿ ನದಿ ನೀರಿನ ಮಟ್ಟ ಶನಿವಾರ ಮುಂಜಾನೆ 12 ಗಂಟೆಗೆ 11.6 ಮೀಟರ್ ನಷ್ಟು ಏರಿಕೆಯಾಗಿ ಅಪಾಯದ ಮಟ್ಟದಿಂದ ಮೇಲಮಟ್ಟದಲ್ಲಿ ಹರಿಯುತ್ತಿದೆ .

ಬಂಟ್ವಾಳ ತಾಲೂಕಿನಾದ್ಯಂತ ಭಾರೀ ಗಾಳಿ- ಮಳೆ ಮುಂದುವರಿದಿದ್ದು, ನೇತ್ರಾವತಿ ನೀರಿನ ಮಟ್ಟ ತೀವ್ರ ಹೆಚ್ಚಾಗಿದ್ದು, ಅಪಾಯಕಾರಿಯಾಗಿ ಹರಿಯುತ್ತಿದೆ.

Ramanatha-Raiಕಳೆದ ರಾತ್ರಿಯಿಂದ ಸುರಿದ ಮಳೆಗೆ ಬಂಟ್ವಾಳದಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿದೆ. ನಿನ್ನೆ 54 ಅಂಗಡಿ, ಮುಂಗಟ್ಟುಗಳು ಜಲಾವೃತಗೊಂಡಿದ್ದರೆ, ಇಂದು ಬೆಳಗ್ಗೆ ಈ ಸಂಖ್ಯೆ 200 ದಾಟಿದೆ. 1000ಕ್ಕೂ ಅಧಿಕ ಮಂದಿ ಸಂತ್ರಸ್ತರಾಗಿದ್ದಾರೆ. ಈ ನಡುವೆ ತಾಲೂಕಿನಲ್ಲಿ ಐ.ಬಿ. ಮತ್ತು ಪಾಣೆಮಂಗಳೂರಿನ ಶಾರದಾ ಪ್ರೌಢಶಾಲೆಯಲ್ಲಿ ತೆರೆದಿರುವ ಗಂಜಿ ಕೇಂದ್ರದಲ್ಲಿ ಸಂತ್ರಸ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

ನೇತ್ರಾವತಿ ಪ್ರವಾಹದಿಂದ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಮನೆ , ಬಂಟ್ವಾಳ ಬಂಟರ ಭವನಕ್ಕೂ ನೆರೆ ನೀರು ಪ್ರವೇಶಿಸಿದೆ.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ಮತ್ತು ಮೊದಲಾದವರು ಉಪಸ್ಥಿತರಿದ್ದರು.

Ramanatha-Rai

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English