ಬಂಟ್ವಾಳ: ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹಾಗೂ ಅಧಿಕಾರಿಗಳೊಂದಿಗೆ ಶನಿವಾರ ಬಂಟ್ವಾಳದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ಶನಿವಾರ ಸಂಜೆ ಸಿಎಂ ಅವರು ಬಂಟ್ವಾಳಕ್ಕೆ ಆಗಮಿಸುತ್ತಾರೆ ಎಂದು ಹೇಳಲಾಗಿತ್ತಾದರೂ ಬಳಿಕ ಸಿಎಂ ಅವರ ದ.ಕ.ಜಿಲ್ಲಾ ಪ್ರವಾಸ ರದ್ದುಗೊಂಡಿತ್ತು. ಇಂದು(ಆ. 10ರಂದು) ಸಂಜೆ 4.30ಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಲಿದ್ದಾರೆ.
ಬಂಟ್ವಾಳ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರವಿವಾರ ಬೆಳಗ್ಗೆ ಭೇಟಿ ಪರಿಶೀಲನೆ ನಡೆಸುವ ಸಾಧ್ಯತೆ ಇದ್ದು, ಆದರೆ ಅದು ಇನ್ನೂ ಖಚಿತಗೊಂಡಿಲ್ಲ.
Click this button or press Ctrl+G to toggle between Kannada and English