ಎಸ್ ಅಂಗಾರ ರವರಿಗೆ ಈ ಬಾರಿಯೂ ತಪ್ಪಿದ ಸಚಿವ ಸ್ಥಾನ

2:48 PM, Tuesday, August 20th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

S-angaaraಮಂಗಳೂರು : ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಮಂತ್ರಿಗಿರಿ ಪಟ್ಟ ದಕ್ಕದಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಬಿಜೆಪಿಗೆ 7 ಶಾಸಕರನ್ನು ಕೊಟ್ಟರೂ ಜಿಲ್ಲೆಗೆ ಮಂತ್ರಿ ಭಾಗ್ಯ ಸಿಕ್ಕಿಲ್ಲ. ನೂತನ ಸಚಿವ ಸಂಪುಟ ಪಟ್ಟಿಯಲ್ಲಿ ಕೊನೆ ಕ್ಷಣದವರೆಗೆ ಸುಳ್ಯ ಶಾಸಕ ಎಸ್.ಅಂಗಾರ ಅವರು ಹೆಸರು ಕಾಣಿಸಿಕೊಂಡಿತ್ತು. ಸಚಿವ ಸ್ಥಾನ ದೊರಕುವ ನಿರೀಕ್ಷೆಯಲ್ಲಿ ಅಂಗಾರ ನಿನ್ನೆ ರಾತ್ರಿಯೇ ಕುಟುಂಬದೊಂದಿಗೆ ಬೆಂಗಳೂರಿಗೆ ತೆರಳಿದ್ದರು. ಆದರೆ ಕಡೇ ಕ್ಷಣದಲ್ಲಿ ಅಂಗಾರ ಹೆಸರು ಪಟ್ಟಿಯಿಂದ ಕೈಬಿಟ್ಟಿರುವುದು ನಿರಾಶೆ ಮೂಡಿಸಿದೆ.

ಸತತ 6 ಬಾರಿ ಸುಳ್ಯ ವಿಧಾನ ಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಗೆದ್ದ ಅಂಗಾರ ಸೋಲಿಲ್ಲದ ಸರದಾರ ಎಂದೇ ಗುರುತಿಸಿ ಕೊಂಡಿದ್ದರು.

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಕ್ಷೇತ್ರವನ್ನು ಬಿಜೆಪಿ ತನ್ನದಾಗಿಸಿದ್ದು, ಹೀಗಾಗಿ ಮುಖ್ಯಮಂತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರಿಗೆ ಮಂತ್ರಿಗಿರಿ ನೀಡಬಹುವುದೆಂಬ ಸಾಕಷ್ಟು ನಿರೀಕ್ಷೆಗಳಿದ್ದು, ಈ ನಿರೀಕ್ಷೆಗಳಿಗೆ ಮುಖ್ಯಮಂತ್ರಿ ತಣ್ಣೀರೆರಿಚಿದ್ದಾರೆ. ಈ ಬಗ್ಗೆ ಕರಾವಳಿಯಾದ್ಯಂತ ಟೀಕೆಗಳು ವ್ಯಕ್ತವಾಗುತ್ತಿದ್ದು. ಕುಂದಾಪುರ ಕ್ಷೇತ್ರದಿಂದ 5 ಬಾರಿ ಗೆದ್ದಿರುವ ಶ್ರೀನಿವಾಸ ಶೆಟ್ಟಿಯವರಿಗೆ ಸ್ಥಾನ ದೊರಕುವ ಸಾಧ್ಯತೆಗಳಿವೆ ಎಂಬ ಕುತೂಹಲ ಮನೆ ಮಾಡಿತ್ತು. ಆದರೆ ಕರಾವಳಿಯಲ್ಲಿ ಯಾರಿಗೂ ಸಚಿವ ಸ್ಥಾನ ನೀಡದೇ ಇರುವುದು ಬಿಜೆಪಿ ಶಾಸಕರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಬೇಸರ ಉಂಟು ಮಾಡಿಸಿದೆ. ಇನ್ನು ಎರಡನೇ ಹಂತದ ಪಟ್ಟಿಯಲ್ಲಿ ಇನ್ನು ಬಿಡುಗಡೆಯಾಗಲಿದ್ದು, ಸಚಿವ ಸ್ಥಾನ ನೀಡಬಹುವುದೆಂಬ ನಿರೀಕ್ಷೆಯಲ್ಲಿದ್ದಾರೆ.

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English