ಬೆಳ್ತಂಗಡಿ : ಪ್ರವಾಹ ಪೀಡಿತ ಕುಟುಂಬಗಳಿಗೆ ನೆರವಾಗಲು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಮುಖಾಂತರ ರೂ.25ಕೋಟಿ ಮೊತ್ತವನ್ನು ಮಂಜೂರು ಮಾಡಲಾಗಿದ್ದು, ಈ ಮೊತ್ತವನ್ನುಮುಖ್ಯಮಂತ್ರಿ ಪರಿಹಾರ ನಿಧಿಗೆ ವರ್ಗಾಯಿಸಲಾಗುವುದು.ಈ ಸಂಬಂಧ ವೀರೇಂದ್ರ ಹೆಗ್ಗಡೆಯವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಪರಿಹಾರದ ಮೊತ್ತವನ್ನು ಪಾವತಿಸಲಿರುವರು.
ಬೆಳ್ತಂಗಡಿ ತಾಲೂಕಿನಲ್ಲಿ 174 ಮನೆಗಳು ಹಾನಿಯಾಗಿರುವ ವರದಿ ಲಭ್ಯವಿದ್ದು ಮಾನ್ಯ ಶಾಸಕರ ಮುಂದಾಳತ್ವದಲ್ಲಿ ಪುನರ್‌ನಿರ್ಮಾಣದ ಕೆಲಸ ಪ್ರಾರಂಭಗೊಂಡಿರುತ್ತದೆ. ಶಾಸಕ ಹರೀಶ್ ಪೂಂಜಾರವರು ಈ ನಿಟ್ಟಿನಲ್ಲಿಕೈಗೊಮಡಿರುವ ಪ್ರಯತ್ನಗಳು ಶ್ಲಾಘನಾರ್ಹವಾಗಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತಗಳು ಉತ್ತಮ ಸಹಕಾರವನ್ನು ನೀಡುತ್ತಿವೆ. ಬೆಳ್ತಂಗಡಿ ತಾಲೂಕಿನ ಸಂತ್ರಸ್ಥ ಕುಟುಂಬಗಳಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲುಯೋಜನೆಯ ವತಿಯಿಂದ ರೂ.50 ಲಕ್ಷ ಮೊತ್ತವನ್ನು’ಕಾಳಜಿ ಬೆಳ್ತಂಗಡಿ ಫ್ಲಡ್‌ರಿಲೀಫ್‌ಫಂಡ್‌ಗೆ’ ವರ್ಗಾಯಿಸಲಾಗುವುದು.
ನೆರೆ ಹಾವಳಿ, ಭೂಕುಸಿತ, ಬಿರುಗಾಳಿ ಮುಂತಾದ ಪ್ರಕೋಪಗಳು ಪುನರಾವರ್ತಿಸುತ್ತಿರುವ ಹಿನ್ನಲೆಯಲ್ಲಿ ತುರ್ತುರಕ್ಷಣೆಗೆಂದು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋeನೆಯ ಅಂಗಸಂಸ್ಥೆಗಳ ಪೈಕಿ ಜನಜಾಗೃತಿ ವೇದಿಕೆ, ಪ್ರಗತಿಬಂಧು ಒಕ್ಕೂಟಗಳು, ಜ್ಞಾನವಿಕಾಸ ಕೇಂದ್ರಗಳು, ಸ್ವಸಹಾಯ ಸಂಘಗಳು ಜಂಟಿ ಬಾಧ್ಯತಾ ಗುಂಪುಗಳು, ಸಕ್ರಿಯವಾಗಿದ್ದು ಇವರುಗಳಿಂದ ಆಯ್ದ ಸದಸ್ಯರ ತಂಡವೊಂದನ್ನು ಪ್ರತಿತಾಲೂಕು ಮಟ್ಟದಲ್ಲಿ ರಚಿಸಲಾಗುವುದು. ಪ್ರತಿಯೊಂದು ತಾಲೂಕಿನಲ್ಲಿಯೂ 100 ಸದಸ್ಯರುಗಳ ವಿಪತ್ತು ನಿರ್ವಹಣಾ ತಂಡವೊಂದನ್ನು ರಚಿಸಲಾಗುವುದು. ರಾಜ್ಯದಾದ್ಯಂತ ಸುಮಾರು 2 ಲಕ್ಷ ಸದಸ್ಯರುಗಳುಳ್ಳ ’ವಿಪತ್ತು ನಿರ್ವಹಣಾ ವೇದಿಕೆ’ಯನ್ನು ಸ್ಥಾಪಿಸಲಾಗುವುದು. ಇವರಿಗೆ ರಾಷ್ಟ್ರೀಯ ವಿಪತ್ತುಸ್ಪಂದನಾ ಪಡೆಯಿಂದ ತರಬೇತಿ ದೊರಕಿಸುವುದಲ್ಲದೆ, ಅಗತ್ಯವಿರುವ ಉಪಕರಣಗಳನ್ನು ದಾಸ್ತಾನು ಇರಿಸಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ತಾಲೂಕಿನಲ್ಲಿ ಯಾವುದೇ ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಕೂಡಲೇ ಸ್ಪಂದಿಸುವಂತೆ ವೇದಿಕೆಯು ಕಾರ್ಯನಿರ್ವಹಿಸುವುದು.
ಈ ಕುರಿತಂತೆಎನ್.ಡಿ.ಆರ್.ಎಫ್ (ನ್ಯಾಶನಲ್‌ಡಿಸಾಸ್ಟರ್‌ರೆಸ್ಪಾನ್ಸ್ ಫೋರ್ಸ್) ಮತ್ತು ಸಮಾನ ಮನಸ್ಕರೊಂದಿಗೆ ಸಮಾಲೋಚನೆ ನಡೆಸಿ ಸದ್ಯದಲ್ಲಿಯೇಇದಕ್ಕೆಅಂತಿಮ ಸ್ವರೂಪವನ್ನು ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಅಗತ್ಯವಿರುವ ಹಣವನ್ನು ಕ್ಷೇತ್ರದಿಂದ ಒದಗಿಸಲಾಗುವುದು.
ಜೀವವೈವಿದ್ಯಗಳಿಂದ ಕೂಡಿರುವ ಪಶ್ಚಿಮ ಘಟ್ಟ ಶ್ರೇಣಿಯುಹಲವಾರು ಕಾರಣಗಳಿಂದ ಸೂಕ್ಷ್ಮ ಸನ್ನಿವೇಶ ನಿರ್ಮಾಣವಾಗಿದೆ.ಈ ವರ್ಷಘಟ್ಟ ಪ್ರದೇಶದಲ್ಲಿ ಸುಮಾರು 500 ಕ್ಕೂ ಮಿಕ್ಕಿದ ಸ್ಥಳಗಳಲ್ಲಿ ಭೂಕುಸಿತ ಉಂಟಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಜೊತೆಯಲ್ಲಿ ಈ ಘಟ್ಟ ಪ್ರದೇಶದಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಪ್ರಾಕೃತಿಕ ದುರಂತದ ಸಾಧ್ಯತೆಗಳು ಹೆಚ್ಚಾಗ ತೊಡಗಿವೆ. ಈ ಹಿನ್ನಲೆಯಲ್ಲಿ ಪ್ರಾಕೃತಿಕ ಸಮತೋಲನವನ್ನು ಪಶ್ಚಿಮ ಘಟ್ಟದಲ್ಲಿ ಕಾಪಾಡಿಕೊಳ್ಳಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ, ಇಲ್ಲಿ ವಾಸಿಸುತ್ತಿರುವ ಜನಸಮೂಹದ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳುವ ಕುರಿತಂತೆ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರಾಷ್ಟ್ರೀಯ ಮಟ್ಟದ ಸಂಶೋಧನಾ ಸಂಸ್ಥೆಯಲ್ಲಿರೂ. 2 ಕೋಟಿನೆರವಿನೊಂದಿಗೆ ’ಪಶ್ಚಿಮ ಘಟ್ಟಅಧ್ಯಯನ ಪೀಠ’ವನ್ನುಸ್ಥಾಪಿಸಲಾಗುವುದು. ಪಶ್ಚಿಮ ಘಟ್ಟದ ಪ್ರಸ್ತುತ ಪರಿಸ್ಥಿತಿ ಮತ್ತು ಭವಿಷ್ಯದ ಕ್ರಮಗಳ ಕುರಿತಂತೆ ಸಂಶೋಧನಾ ವರದಿಯೊಂದನ್ನುತಯಾರಿಸಲಾಗುವುದು. ನಂತರ ಸಮಾನ ಮನಸ್ಕರ ಭಾಗವಹಿಸುವಿಕೆಯೊಂದಿಗೆ ಸರಕಾರದ ಗಮನ ಸೆಳೆಯಲಾಗುವುದು. ಇದಕ್ಕಾಗಿ ಎರಡು ವರ್ಷಗಳ ಕಾಲಮಿತಿಯೊಂದಿಗೆ ಅಧ್ಯಯನ ಪೀಠವುಕ್ರಿಯಾ ಯೋಜನೆಯನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸುವುದು ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English