ರಾಜ್ಯ ಬಿಜೆಪಿಗೆ ನಳಿನ್ ಕುಮಾರ್ ಕಟೀಲು ಅಧ್ಯಕ್ಷ

9:39 PM, Tuesday, August 20th, 2019
Share
1 Star2 Stars3 Stars4 Stars5 Stars
(No Ratings Yet)
Loading...

nalin kumar kateel ಮಂಗಳೂರು : ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ , ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಇಂದು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಶಾಕ್ ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಇದೀಗ ಈ ಸ್ಥಾನಕ್ಕೆ ಸಂಘ ಪರಿವಾರ ಹಿನ್ನೆಲೆಯ ನಳಿನ್ ಕುಮಾರ್ ಕಟೀಲು ಅವರನ್ನು ನೇಮಕ ಮಾಡುವ ಮೂಲಕ ಒಬ್ಬರಿಗೆ ಒಂದು ಹುದ್ದೆ ಎಂಬ ನೀತಿಯನ್ನು ಪಾಲಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English