- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾಜ್ಯ ಬಿಜೆಪಿಗೆ ನಳಿನ್ ಕುಮಾರ್ ಕಟೀಲು ಅಧ್ಯಕ್ಷ

nalin kumar kateel [1]ಮಂಗಳೂರು : ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ , ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಇಂದು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಶಾಕ್ ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಇದೀಗ ಈ ಸ್ಥಾನಕ್ಕೆ ಸಂಘ ಪರಿವಾರ ಹಿನ್ನೆಲೆಯ ನಳಿನ್ ಕುಮಾರ್ ಕಟೀಲು ಅವರನ್ನು ನೇಮಕ ಮಾಡುವ ಮೂಲಕ ಒಬ್ಬರಿಗೆ ಒಂದು ಹುದ್ದೆ ಎಂಬ ನೀತಿಯನ್ನು ಪಾಲಿಸಲಾಗಿದೆ.