ಚಿಕ್ಕಮಗಳೂರು : ನೆರೆಪೀಡಿತ ಪ್ರದೇಶಗಳಿಗೆ ನೂತನ ಶಾಸಕರ ಭೇಟಿ

5:19 PM, Wednesday, August 21st, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Chikka-magaluruಚಿಕ್ಕಮಗಳೂರು : ಶಾಸಕರಾದ ಸಿ.ಟಿ.ರವಿ ಮತ್ತು ಮಾಧು ಸ್ವಾಮಿ ಇಂದು ಜಿಲ್ಲೆಯ ವಿವಿಧ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಟಿ.ರವಿ ಮತ್ತು ಮಾಧು ಸ್ವಾಮಿ ಮೂಡಿಗೆರೆ ತಾಲೂಕಿನ ಬಣಕಲ್, ಬಾಳೂರು ಹೊರಟ್ಟಿ, ಮಲೆಮನೆ, ದುರ್ಗದಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಹಳ್ಳಿಗಾಡು ಪ್ರದೇಶಗಳಿಗೆ ತೆರಳಿ ಜನರ ಸಂಕಷ್ಟ ಆಲಿಸಿದ್ದಾರೆ.

ಜನರ ಕಷ್ಟಗಳನ್ನು ಆಲಿಸಿದ ಸಚಿವ ಸಿ.ಟಿ.ರವಿ ಪ್ರವಾಹದಿಂದ ತತ್ತರಿಸಿದ ದುಸ್ಥಿತಿಗೆ ಮರುಗಿ ಕಣ್ಣೀರು ಹಾಕಿದ್ದಾರೆ. ಮಲೆನಾಡಿನ ಸದ್ಯದ ಪರಿಸ್ಥಿತಿಯನ್ನು ಕಂಡು ಮಾಧುಸ್ವಾಮಿ ಆಶ್ಚರ್ಯ ವ್ಯಕ್ತಪಡಿಸಿದರು. ಪ್ರವಾಹ ಮತ್ತು ಭೂಕುಸಿತದಿಂದ ಮನೆ, ಜಮೀನು ಕಳೆದುಕೊಂಡ ಸಂತ್ರಸ್ತರನ್ನು ಸಚಿವರು ಸಂತೈಸಿದರು. ಸಚಿವ ಮಾಧುಸ್ವಾಮಿ ಮತ್ತು ಸಿ.ಟಿ. ರವಿ ಅವರಿಗೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಸಾಥ್ ನೀಡಿದರು.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English