ಮಂಗಳೂರು : ದ.ಕ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಐಪಿಎಸ್ ಅಧಿಕಾರಿ ಆರ್. ರಮೇಶ್ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಇಂದು ನಿಧನರಾಗಿದ್ದಾರೆ.
ಭೂ ಅಂಗಾಂಗ ವೈಫಲ್ಯದಿಂದ ಬೆಂಗಳೂರಿಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿಸ್ತೆ ಪಡೆಯುತ್ತಿದ್ದರು. ಡಿಐಜಿ ಭಡ್ತಿ ಹೊಂದಿದ ಬಳಿಕ ಅವರು ಹೋಮ್ ಗಾರ್ಡ್,ಸಿವಿಲ್ ಡಿಫೆನ್ಸ್ ಇಲಾಖೆಯ ಉನ್ನತ ಹುದ್ದೆ ಅಲಂಕರಿಸಿದ್ದರು.
2005 ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಆರ್. ರಮೇಶ್ ಸಿಎಆರ್ ಡಿಸಿಪಿ ಬೆಂಗಳೂರು ಅಪರಾಧ ವಿಭಾಗದ ಡಿಸಿಪಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮೈಸೂರು ಪೊಲೀಸ್ ಶಾಲೆಗೆ ಇವರು ಅಪಾರ ಕೊಡುಗೆ ಸಲ್ಲಿಸಿದ್ದಾರೆ.
Click this button or press Ctrl+G to toggle between Kannada and English