ಬೆಂಗಳೂರು : ಮಂಗಳವಾರ 10.30 ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಹೈ ಕಮಾಂಡ್ ಈಗಾಗಲೇ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಎಂದು ಘೋಷಿಸಿದೆ. ಅವರು ಅಧಿಕೃತವಾಗಿ ಪದ ಗ್ರಹಣ ಮಾಡುವುದು ಬಾಕಿ ಇದ್ದು, ಮಂಗಳವಾರ ಬೆಳಗ್ಗೆ 9 ಗಂಟೆಗೆ ಅವರನ್ನು ಪಕ್ಷದ ವತಿಯಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಗುತ್ತದೆ. 9.30ಕ್ಕೆ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ 10.30ಕ್ಕೆ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಡಿಯೂರಪ್ಪ ನೇತೃತ್ವದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕಸಭಾ ಚುನಾವಣೆಯಲ್ಲಿ 26 ಸಂಸದರನ್ನು ಗೆಲ್ಲಿಸಿದ್ದಾರೆ. ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದೇ ಯಡಿಯೂರಪ್ಪನವರು. ಅವರಿಂದಾಗಿಯೇ ಪಕ್ಷ ಬಲಿಷ್ಟವಾಗಿ ಬೆಳೆದಿದೆ. ನಳೀನ್ ಕುಮಾರ್ ಕಟೀಲ್ ಬಿಎಸ್ವೈ ಗೆ ಸಮರ್ಥ ಉತ್ತರಾಧಿಕಾರಿ ಎಂದರು.
ಇನ್ನು ಮುಖ್ಯಮಂತ್ರಿಗಳು ಯಾವ ಜವಾಬ್ದಾರಿ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಆದರೆ ಖಾತೆ ಹಂಚಿಕೆ ವಿಳಂಬದಿಂದ ಯಾವುದೇ ಅಭಿವೃದ್ದಿ ಕಾರ್ಯಗಳು ನಿಂತಿಲ್ಲ. ನನ್ನ ಹಾಗೂ ಅಶೋಕ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
Click this button or press Ctrl+G to toggle between Kannada and English