ಮಂಗಳೂರು : ರಾಷ್ಟ್ರದಲ್ಲಿಯೇ ಪ್ರಥಮ ಬಾರಿಗೆ ಕೃಷಿ ಮತ್ತು ಪತ್ತಿನ ಸಹಕಾರಿ ಸಂಘಗಳ 26 ಮಂದಿ ಪದಾಧಿಕಾರಿಗಳಿಗೆ ಇಸ್ರೆಲ್‌ಗೆ ಕೃಷಿ-ಹೈನುಗಾರಿಕೆ ಕುರಿತ ಅಧ್ಯಯನ ಪ್ರವಾಸಕೈಗೊಳ್ಳಲು ಅವಕಾಶ ಮಾಡಿಕೊಟ್ಟ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ಗೆ ಮಂಗಳವಾರ ಬ್ಯಾಂಕ್‌ನ ಸಭಾಂಗಣದಲ್ಲಿ ಅಭಿವಂದನೆ ಕಾರ್ಯಕ್ರಮ ನಡೆಯಿತು.
ಡಾ.ಎಂ.ಎನ್.ರಾಜೇಂದ್ರ ಕುಮಾರ್ ‘ಸಹಕಾರ ರತ್ನ-ರೈತ ಬಂಧು’ ಮಾತ್ರವಲ್ಲ ಸಮಾಜದ ಶಕ್ತಿಯೂ ಆಗಿದ್ದಾರೆ ಎಂದು ಮಂಗಳೂರು ವಿವಿ ಕುಲಪತಿ ಡಾ. ಪಿ.ಸುಬ್ರಹ್ಮಣ್ಯ ಎಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಡಾ.ಎಂ.ಎನ್. ರಾಜೇಂದ್ರ ಕುಮಾರ್ ಕೇವಲ ಒಬ್ಬ ವ್ಯಕ್ತಿಯಾಗಿದ್ದರೆ ಇಂತಹ ಸ್ಥಾನಕ್ಕೇರಲು ಸಾಧ್ಯವಿರಲಿಲ್ಲ. ಸಂಘಟನಾ ಸಾಮರ್ಥ್ಯ ಮತ್ತು ತನ್ನ ಕಲ್ಪನೆ ಹಾಗೂ ಯೋಜನೆಗಳನ್ನು ಅನುಷ್ಠಾನಗೊಳಿಸುವ ಶಕ್ತಿಯೇ ಅವರ ಸಾಧನೆಗೆ ಪ್ರಮುಖ ಕಾರಣವಾಗಿದೆ. ರಾಜೇಂದ್ರ ಕುಮಾರ್ ಸಹಕಾರ ರಂಗದ ಛಾಪನ್ನೇ ಬದಲಾಯಿಸಿದ್ದಾರೆ. ಮಹಿಳೆಯರಲ್ಲಿ ಆರ್ಥಿಕ ಶಕ್ತಿ ತುಂಬುವ ಮೂಲಕ ಅವರು ಸ್ವಾಲಂಬಿ ಜೀವನ ನಡೆಸಲೂ ಕಾರಣವಾಗಿದೆ. ಎಲ್ಲರ ಮಾತುಗಳನ್ನು ಆಲಿಸುವ ಮತ್ತು ಸ್ಪಂದಿಸುವ ಹಾಗೂ ಸ್ವಂತಿಕೆ ಉಳಿಸಿಕೊಂಡು ಸೂಕ್ತ ತೀರ್ಮಾನ ತೆಗೆದುಕೊಳ್ಳುವ ಅವರ ವ್ಯಕ್ತಿತ್ವವು ಎಲ್ಲರಿಗೂ ಆದರ್ಶವಾಗಿದೆ ಎಂದು ಡಾ.ಪಿ.ಸುಬ್ರಹ್ಮಣ್ಯ ಎಡಪಡಿತ್ತಾಯ ಹೇಳಿದರು.
ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್‌ನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ರವಿರಾಜ ಹೆಗ್ಡೆ, ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ರಾಜಾರಾಮ ಭಟ್, ಶಶಿ ಕುಮಾರ್, ಸದಾಶಿವ ಉಳ್ಳಾಲ ಮತ್ತಿತರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English