ಬೆಂಗಳೂರು : ಅತಿವೃಷ್ಟಿ ಬಗ್ಗೆ ರಾಜ್ಯ ಸರಕಾರದ ನಿರ್ಲಕ್ಷ ಮತ್ತು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಧರಣಿ ನಡೆಸುತ್ತಿದೆ .
ನಗರದ ಮೌರ್ಯ ಸರ್ಕಲ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಕಾಂಗ್ರೆಸ್ ಶಾಸಕರು, ನಾಯಕರು ಸಾಥ್ ನೀಡಿದ್ದಾರೆ. ಇಂದು ಸಂಜೆ 5ವರೆಗೂ ಈ ಧರಣಿ ಸತ್ಯಾಗ್ರಹ ನಡೆಯಲಿದ್ದು ಬಳಿಕ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಭೇಟಿಯಾಗಿ ಮನವಿ ಪತ್ರ ನೀಡಲಿದ್ದಾರೆ.
Click this button or press Ctrl+G to toggle between Kannada and English