ಬೆಂಗಳೂರು : ರಾಜ್ಯವು ಪ್ರವಾಹದಿಂದ ತತ್ತರಿಸಿ ಹೋಗಿದ್ದು, ಈ ಕುರಿತು ಮಾಹಿತಿ ಪಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಫಿಟ್ ಇಂಡಿಯಾ ಅಭಿಯಾನದ ಪ್ರಯುಕ್ತ ವಿಧಾನಸೌಧದ ಮುಂಭಾಗ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಲವು ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ಹಾಗಾಗಿ ಪ್ರವಾಹ ಪೀಡಿತ ಪ್ರದೇಶಗಳನ್ನು ನಡೆಸಲು ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಅವರಿಗೆ ಮನದಟ್ಟು ಮಾಡಿಕೊಡಲಾಗುವುದು. ಹೆಚ್ಚಿನ ಪರಿಹಾರಕ್ಕೂ ಒತ್ತಾಯಿಸಲಾಗುವುದು. ಈ ಕುರಿತು ಕೇಂದ್ರದಿಂದ ಆದಷ್ಟು ಶೀಘ್ರದಲ್ಲಿ ಶುಭ ಸುದ್ದಿ ಸಿಗುವ ವಿಶ್ವಾಸ ಇದೆ” ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಫಿಟ್ ಇಂಡಿಯಾ ಆಂದೋಲದಲ್ಲಿ ನಾವೆಲ್ಲರು ಭಾಗಿಯಾಗಿ ಯಶಸ್ವಿಗೊಳಿಸಬೇಕು. ಕೇಂದ್ರವು ಕ್ರೀಡೆಗೆ ಹೆಚ್ಚುಒತ್ತು ನೀಡುವಲ್ಲಿ ತಮ್ಮ ಗಮನಹರಿಸಿದ್ದು, ಹೀಗಾಗಿ ಪ್ರತಿ ರಾಜ್ಯದಲ್ಲಿ ಕ್ರೀಡೆಯ ಉತ್ತೇಜನಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಕೆಲವು ಯೋಜನೆಗಳು ಪ್ರಾರಂಭದ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಆ ಎಲ್ಲಾ ಯೋಜನೆಗಳನ್ನು ಜಾರಿಗೆಯಾಗಲಿದೆ. ಅಲ್ಲದೆ, ಈ ಸಂದರ್ಭದಲ್ಲಿ ಧ್ಯಾನಚಂದ್ರ ಅವರ ಸಾಧನೆಯನ್ನು ಸ್ಮರಿಸಿ ಇಳಿ ವಯಸ್ಸಿನಲ್ಲಿ ಹಾಕಿ ಹಾಡುವ ಮೂಲಕ ಇತರ ಕ್ರೀಡಾಪಟುಗಳಿಗೆ ಮಾದರಿಯಾಗಿದ್ದಾರೆ ಎಂದರು.
ಈ ವೇಳೆ ಕ್ರೀಡಾಪಟು ಪ್ರಕಾಶ್ ನಂಜಪ್ಪ, ಸಲ್ಮಾನ್ ಪಾಷಾ, ಅರ್ಚನಾ ಕಾಮತ್ ಸಮಾರಂಭದಲ್ಲಿ ಭಾಗಿಯಾಗಿ ಯುವ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು. ಅಭಿಯಾನ ಕಾರ್ಯಕ್ರಮಕ್ಕೆ ಸಚಿವರಾದ ಸಿ.ಟಿ ರವಿ, ಬಸವರಾಜ್ ಬೊಮ್ಮಾಯಿ, ಆರ್ ಅಶೋಕ್ ಅವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English