- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

2020 ರೊಳಗೆ ನಮ್ಮ ಮೆಟ್ರೋ ಮಾರ್ಗಗಳ ಕಾಮಗಾರಿ ಪೂರ್ಣ : ಬಿಎಸ್ ಯಡಿಯೂರಪ್ಪ

BS-yadiyurappa [1]ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಿ. ಎಂ. ಆರ್. ಸಿ. ಎಲ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕಾಮಗಾರಿ ನಡೆಯುತ್ತಿರುವ ಬಹುತೇಕ ಮಾರ್ಗಗಳು 2020 ರೊಳಗೆ ಸಂಚಾರಕ್ಕೆ ಮುಕ್ತವಾಗಲಿವೆ.

ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿರುವ ಯಡಿಯೂರಪ್ಪ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ‘ನಮ್ಮ ಮೆಟ್ರೋ’ ಪ್ರಗತಿ ಪರಿಶೀಲನೆ ನಡೆಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ಬ್ರವಿಕುಮಾರ್, ಮುಖ್ಯ ಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀ ನಾರಾಯಣ್, ಬಿ. ಎಂ. ಆರ್. ಸಿ. ಎಲ್. ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಉಪಸ್ಥಿತರಿದ್ದರು.

 

ಪ್ರಸ್ತುತ 72 ಕಿ.ಮೀ ಉದ್ದ ಹಾಗೂ 61 ನಿಲ್ದಾಣಗಳನ್ನು ಹೊಂದಿರುವ ಮೆಟ್ರೋ-2 ನೇ ಹಂತ ಅನುಷ್ಠಾನದ ವಿವಿಧ ಹಂತಗಳಲ್ಲಿದೆ. ಬಹುತೇಕ ಮಾರ್ಗಗಳು 2020 ರೊಳಗೆ ಸಂಚಾರಕ್ಕೆ ಮುಕ್ತವಾಗಲಿವೆ. ಸರ್ಕಾರ 2ನೇ ಹಂತ ‘ಎ’ ಅಡಿಯಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಕೆ.ಆರ್.ಪುರಂವರೆಗೆ 17 ಕಿ.ಮೀ. ಉದ್ದದ ಮೆಟ್ರೋ ಮಾರ್ಗವನ್ನು 5995 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡಿದೆ.