ಮಂಗಳೂರು : ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಬಂಧನ ವಿರೋಧಿಸಿ ಕೈ ಕಾರ್ಯಕರ್ತರು ಹಲವೆಡೆ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಶಾಸಕರು ಸೇರಿದಂತೆ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬಿಜೆಪಿ, ಕಾಂಗ್ರೆಸ್-ಜೆಡಿಎಸ್‌ನ 17 ಶಾಸಕರನ್ನು ಕೋಟಿ ಕೋಟಿ ಆಮಿಷ ನೀಡಿ ಮುಂಬೈಗೆ ಕಳುಹಿಸಿದಾಗ ಇಡಿ, ಐಟಿ ಎಲ್ಲಿ ಹೋಗಿತ್ತು? ಎಂದು ಪ್ರಶ್ನಿಸಿದರು.
ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಜೆ ಆರ್ ಲೋಬೋ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಚಿಕ್ಕಮಗಳೂರು, ಆಲ್ದೂರು, ಬಾಳೆಹೊನ್ನೂರು ಶೃಂಗೇರಿಯಲ್ಲಿ ಪ್ರತಿಭಟನೆ ನಡೆಯುತಿದ್ದು, ಟೈರ್‌ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
Click this button or press Ctrl+G to toggle between Kannada and English