ಬಜಗೋಳಿ : ಕೇವಲ ಹಣದಿಂದ ಸುಖವನ್ನು ಕಾಣಲು ಅಸಾಧ್ಯ. ದೇವರ ಮೇಲೆ ಅಚಲ ಭಕ್ತಿ ಹೊಂದಿದಲ್ಲಿ ಮಾನವನು ಸಹಿಷ್ಣುತೆಯಿಂದ ಬದುಕಲು ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಹೇಳಿದರು.
ಸೆ. 3ರ ಸಂಜೆ ಮಾಳ ಮಲ್ಲಾರ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಮಾಳ ಮಲ್ಲಾರು ದಿ| ಶಂಕರ್ ಜೋಶಿ ವೇದಿಕೆಯಲ್ಲಿ ಜರಗಿದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸ್ವರ್ಣ ಮಹೋತ್ಸವ ಸಂಭ್ರಮದ ಅಧ್ಯಕ್ಷತೆ ವಹಿಸಿ, ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ, ಶಾಲಾ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.
ಗಣಪತಿ ಸರ್ವಧರ್ಮಿಯರಿಂದ ಆರಾಧಿಸಲ್ಪಡುವವ ದೇವರು. ಈ ಮೂಲಕ ಗಣೇಶೋತ್ಸವ ಸರ್ವಧರ್ಮ ಸಹಿಷ್ಣುತೆಯನ್ನು ಸಾರುತ್ತಿದೆ. ಸಾಮೂಹಿಕ ಪ್ರಾರ್ಥನೆ ಯಿಂದ ದೇವರ ಸ್ವರೂಪ ರೂಪುಗೊಳ್ಳುತ್ತದೆ. ಆ ಮೂಲಕ ಸಂಘಟನೆಗೆ ಕಾರಣವಾಗುತ್ತದೆ. ಇದೇ ಕಾರಣದಿಂದಾಗಿ ಸಾರ್ವಜನಿಕ ಗಣೇಶೋತ್ಸವವನ್ನು ದೇಶದ ಸ್ವಾತಂತ್ರ್ಯ ಚಳುವಳಿಯ ಸಂದರ್ಭ ಬಾಲಗಂಗಾಧರ ತಿಲಕರು ಆರಂಭಿಸಿದ್ದರು. ಅದನ್ನು ಸಮಾಜ ಒಪ್ಪಿಕೊಂಡು ಮುಂದು ವರಿಸುತ್ತಿದೆ ಎಂದರು.
ಶಾಸಕ ವಿ. ಸುನಿಲ್ ಕುಮಾರ್ ಅವರು ಮಾತನಾಡಿದರು. ಜಿ.ಪಂ. ಸದಸ್ಯ ಉದಯ ಎಸ್. ಕೋಟ್ಯಾನ್, ಗೌರವಾಧ್ಯಕ್ಷ ಸದಾನಂದ ನಾಯಕ್, ಹುರ್ಲಾಡಿ ರಘುವೀರ ಎ. ಶೆಟ್ಟಿ, ದೇಜಪ್ಪ ಸಾಲಿಯಾನ್, ಶೇಖರ ಶೆಟ್ಟಿ, ಜಯಶೆಟ್ಟಿ, ಮಹೇಶ್ ಶೆಟ್ಟಿ ಕುಡುಪುಲಾಜೆ, ಮಹಾವೀರ್ ಜೈನ್, ಮುನಿಯಾಲು ಉದಯಕೃಷ್ಣ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಉದಯ ಶೆಟ್ಟಿ, ರಾಜಾಪುರ ಸಾರಸ್ಪತ ಸೊಸೈಟಿಯ ಅಧ್ಯಕ್ಷ ರವೀಂದ್ರ ಪ್ರಭು, ತಾ.ಪಂ. ಸದಸ್ಯೆ ಸೌಭಾಗ್ಯ ಅತಿಥಿಗಳಾಗಿ ಭಾಗವಹಿಸಿದರು.
ಪ್ರಭಾಕರ ಜೋಶಿ ಸ್ವಾಗತಿಸಿದರು. ಶ್ರೀರಂಗ ಜೋಶಿ ಸ್ಮರಣ ಸಂಚಿಕೆಯ ಬಗ್ಗೆ ಮಾಹಿತಿ ನೀಡಿದರು. ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ತೆಂಡುಲ್ಕರು ಪ್ರಸ್ತಾವಿಸಿದರು. ಗಜಾನನ ಮರಾಠೆ ಕಾರ್ಯಕ್ರಮ ನಿರೂಪಿಸಿದರು. ಮಾಳ ಗ್ರಾ.ಪಂ. ಅಧ್ಯಕ್ಷ ಅಜಿತ್ ಹೆಗ್ಡೆ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಆಳ್ವಾಸ್ ನೃತ್ಯ ವೈಭವ ಕಾರ್ಯಕ್ರಮ ನಡೆಯಿತು. ಸುಮಾರು 300 ವಿದ್ಯಾರ್ಥಿಗಳು ನೃತ್ಯಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಡಾ| ಮೋಹನ್ ಆಳ್ವ ಮಾತನಾಡಿ, ಸಾಂಸ್ಕೃತಿಕ ಪರಂಪರೆಯಲ್ಲಿ ಭಾರತ ವಿಶ್ವದಲ್ಲಿ ಶ್ರೇಷ್ಠ ಸ್ಥಾನದಲ್ಲಿದೆ. ಅದನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು. ಹಾಗಾಗಿ ಪ್ರತಿಯೊಬ್ಬರು ತಮ್ಮಲ್ಲಿರುವ ಪ್ರತಿಭೆಗಳನ್ನು ಒಂದಲ್ಲ ಒಂದು ರೀತಿಯಲ್ಲಿ ಅನಾವರಣಗೊಳಿಸಬೇಕು ಎಂದರು.
ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಡಾ| ಮೋಹನ್ ಆಳ್ವ ಮಾತನಾಡಿ, ಸಾಂಸ್ಕೃತಿಕ ಪರಂಪರೆಯಲ್ಲಿ ಭಾರತ ವಿಶ್ವದಲ್ಲಿ ಶ್ರೇಷ್ಠ ಸ್ಥಾನದಲ್ಲಿದೆ. ಅದನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು. ಹಾಗಾಗಿ ಪ್ರತಿಯೊಬ್ಬರು ತಮ್ಮಲ್ಲಿರುವ ಪ್ರತಿಭೆಗಳನ್ನು ಒಂದಲ್ಲ ಒಂದು ರೀತಿಯಲ್ಲಿ ಅನಾವರಣಗೊಳಿಸಬೇಕು ಎಂದರು.
Click this button or press Ctrl+G to toggle between Kannada and English