ಪಿ ಚಿದಂಬರಂ ಬಂಧನಕ್ಕೆ ಅಡ್ಡಿಯಿಲ್ಲ : ಸುಪ್ರೀಂಕೋರ್ಟ್ ಆದೇಶ

12:13 PM, Thursday, September 5th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

P.-chidambaramನವದೆಹಲಿ : ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಸ್ಟಡಿಯಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂಗೆ ಗುರುವಾರದಂದು ಸುಪ್ರೀಂಕೋರ್ಟಿನಿಂದ ಕಹಿ ಸುದ್ದಿ ಸಿಕ್ಕಿದೆ. ಬಂಧನದಿಂದ ರಕ್ಷಣೆ ಕೋರಿ ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಸಿಬಿಐ ವಶದಲ್ಲಿರುವ ಪಿ.ಚಿದಂಬರಂ ಅವರ ವಿಚಾರಣೆಯನ್ನು ಸಿಬಿಐ ಮುಗಿಸಿದ್ದು, ಈಗಾಗಲೇ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಜಾರಿ ನಿರ್ದೇಶನಾಲಯವು ಸೆ.05ರ ತನಕ ಬಂಧಿಸದಂತೆ ಕೋರ್ಟ್ ಸೂಚಿಸಿದೆ.

ಆದರೆ, ನಿರೀಕ್ಷಣಾ ಜಾಮೀನು ಕೋರಿ ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಚಿದಂಬರಂಗೆ ನಿರಾಶೆಯಾಗಿದೆ.

ಸೆ.2ರಂದು ಮುಂದಿನ ಆದೇಶದ ತನಕ ಚಿದಂಬರಂ ಬಂಧಿಸಿ, ತಿಹಾರ್ ಜೈಲಿಗೆ ಕಳಿಸುವಂತಿಲ್ಲ ಎಂದು ತನಿಖಾ ಸಂಸ್ಥೆಗೆ ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಹಾಗೂ ಆರ್ ಬಾನುಮತಿ ವರಿರುವ ನ್ಯಾಯಪೀಠವು ಸೂಚಿಸಿತ್ತು. ಗುರುವಾರದವರೆಗೂ ಕಸ್ಟಡಿಯಲ್ಲೇ ವಿಚಾರಣೆ ನಡೆಸಲು ಮಾತ್ರ ನಿರ್ದೇಶನ ನೀಡಲಾಗಿತ್ತು.

“ಆಗಸ್ಟ್ 21ರಂದು ದೆಹಲಿ ನಿವಾಸದಲ್ಲಿದ್ದ ಚಿದಂಬರಂರನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ್ದಾರೆ. ಅವರಿಗೆ ಭದ್ರತೆ ಬೇಕಿದೆ, ತಿಹಾರ್ ಜೈಲಿಗೆ ಕಳಿಸದಿದ್ದರೆ ಗೃಹಬಂಧನ ವಿಧಿಸಿ’ ಎಂದು ಚಿದಂಬರಂ ಪರ ವಕೀಲ ಕಪಿಲ್ ಸಿಬಾಲ್ ವಾದಿಸಿದ್ದರು.

“ಆದರೆ ಗೃಹ ಬಂಧನವನ್ನು ರಾಜಕೀಯ ಕೈದಿಗಳಿಗೆ ಬಳಸುವ ವಿಧಾನವಾಗಿದೆ, ಇದು ಭ್ರಷ್ಟಾಚಾರ ಪ್ರಕರಣವಾಗಿದ್ದು, ಚಿದಂಬರಂ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು’ ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರಂತೆ, ಚಿದಂಬರಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದು, ಅರ್ಜಿ ತಿರಸ್ಕಾರಗೊಂಡಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English