ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಕಾರ್ತಿಕ್ ಹತ್ಯೆ ಪ್ರಕರಣ : ಮೂವರ ಬಂಧನ

3:45 PM, Thursday, September 5th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

muvara-bandhaanaalvara-bandhana-ಪುತ್ತೂರು : ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಎಂಬಾತನನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಮೀಪ ಸಂಪ್ಯ ಎಂಬಲ್ಲಿ ಮಂಗಳವಾರ ರಾತ್ರಿ ಬರ್ಬರ ಹತ್ಯೆ ಮಾಡಲಾಗಿದ್ದು, ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಪುತ್ತೂರು ಆರ್ಯಾಪು ಗ್ರಾಮದ ಚರಣ್‌ (26 ), ಈತನ ಸಹೋದರ ಕಿರಣ್ (36 ) ಮತ್ತು ಮಂಗಳೂರು ಉಳ್ಳಾಲಬೈಲು ನಿವಾಸಿ ಪ್ರೀತೇಶ್ (28) ಎಂದು ಗುರುತಿಸಲಾಗಿದೆ. ಇನ್ನು ಆರೋಪಿಗಳಿಗೆ ಅಶ್ರಯ ನೀಡಿದ ಮೇರೆಗೆ ಮಂಗಳೂರು ಅತ್ತಾವರ ನಿವಾಸಿ ಸ್ಡೀವನ್ ಮೊಂತೆರೋ ಎಂಬಾತನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿರುತ್ತಾರೆ.

ಯುವಕನೋರ್ವನಿಗೆ ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂದು ಗುರುತಿಸಲಾಗಿದೆ. ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗಣೇಶೊತ್ಸವ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಸ್ಥಳೀಯರಾದ ಚರಣ್ ರಾಜ್, ಕಿರಣ್ ಮತ್ತು ಪ್ರೀತೇಶ್ ಎಂಬವರು ಚೂರಿಯಿಂದ ಇರಿದು ಕಾರ್ತಿಕ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆಗೈಯ್ದಿದ್ದಾರೆ. ಬಳಿಕ, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು. ಘಟನೆ ನಡೆದ ಬಳಿಕ ಸಂಪ್ಯ ಗಣೆಶೋತ್ಸವದ ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಲಾಗಿದ್ದು, ಸ್ಥಳದಲ್ಲಿ ತುಸು ಆತಂಕಕಾರಿ ಸ್ಥಿತಿ ನಿರ್ಮಾಣಗೊಂಡಿತ್ತು. ಕೊಲೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.‌ ಪ್ರಸ್ತುತ ತನಿಖೆ ಪ್ರಗತಿಯಲ್ಲಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English