ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಪರಿಷ್ಕರಣೆ ಅಭಿಯಾನ : ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಚಾಲನೆ

5:39 PM, Thursday, September 5th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

madikeri-ಮಡಿಕೇರಿ: ಇದೇ ಸೆ.1 ರಿಂದ ಅ.15 ರ ವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಪರಿಷ್ಕರಣೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹಾಗೂ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ ಅವರು ಭಿತ್ತಿಪತ್ರ (ಪೋಸ್ಟರ್‌) ಅನಾವರಣ ಮಾಡುವ ಮೂಲಕ ಭಾನುವಾರ ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2020 ರ ಸಂಬಂಧ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮನ್ನು ಸೆ.1 ರಿಂದ ಅ.15 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದರು. ಮುಖ್ಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಿ ಧೃಢೀಕರಿಸು ವುದು ಹಾಗೂ ಮತದಾರರ ವಿವರಗಳನ್ನು ಪರಿಶೀಲಿಸಿ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು, ಮತದಾರರ ಪಟ್ಟಿಯಲ್ಲಿನ ನ್ಯೂನ್ಯತೆಗಳು ಹಾಗೂ ಲೋಪದೋಷಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು. ಕೊಡಗು ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ದಾಖಲಾಗಿರುವ ಬಗ್ಗೆ ಮತ್ತು ನಮೂದುಗಳು ಸರಿ ಇರುವ ಬಗ್ಗೆ ಖಚಿತಪಡಿಸಿಕೊಳ್ಳಲು ಹಾಗೂ ನೋಂದಣಿಯಾಗದೆ ಇರುವ ಯುವಕ, ಯುವತಿಯರು ಮತ್ತು ನಾಗರಿಕರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು 45 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.

ಮತದಾರರ ಪಟ್ಟಿಗೆ ಸೇರ್ಪಡೆ, ಹೆಸರು ತೆಗೆಯಲು, ಸರಿಪಡಿಸಲು ಮತ್ತು ವರ್ಗಾವಣೆ ಮಾಡಲು ನಾಗರಿಕರು/ ಮತದಾರರು ಕ್ರಮ ಕೈಗೊಳ್ಳಬಹುದಾಗಿದೆ. ಆ ನಿಟ್ಟಿನಲ್ಲಿ ಸೇರ್ಪಡೆ:- ಜನವರಿ 01, 2020 ಕ್ಕೆ 18 ವರ್ಷ ತುಂಬಲಿರುವ ನಾಗರಿಕರು ನಮೂನೆ-6 ರೊಂದಿಗೆ ಪೂರಕ ದಾಖಲೆಗಳನ್ನು ಹಾಗೂ ಭಾವಚಿತ್ರವನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬಹುದಾಗಿದೆ. ತೆಗೆದು ಹಾಕುವುದು: ಸ್ಥಳಾಂತರಗೊಂಡ ಹಾಗೂ ಮರಣಹೊಂದಿರುವ ಮತದಾರರ ಹೆಸರನ್ನು ನಮೂನೆ-7 ರೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ತಿದ್ದುಪಡಿ: ಮತದಾರರ ವಿವರಗಳಲ್ಲಿ ನ್ಯೂನ್ಯತೆಗಳಿದ್ದಲ್ಲಿ ನಮೂನೆ-8 ರೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿ ಮತದಾರರ ವಿವರಗಳನ್ನು ತಿದ್ದುಪಡಿ ಮಾಡಬಹುದಾಗಿದೆ. ವರ್ಗಾವಣೆ: ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎರಲ್ಲಿ ಎಂದು ಅನೀಸ್‌ ಕಣ್ಮಣಿ ಜಾಯ್‌ ಅವರು ವಿವರಿಸಿದರು.

ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 543 ಮತಗಟ್ಟೆಗಳು ಇದ್ದು, ಹಾಲಿ ಇರುವ ಮತಗಟ್ಟೆಗಳನ್ನು ಬದಲಾವಣೆ ಮಾಡಬೇಕಾಗಿದ್ದಲ್ಲಿ ಮಾಹಿತಿಯನ್ನು ನೀಡಿದ್ದಲ್ಲಿ ಪರಿಶೀಲನೆ ಮಾಡಿ ಮತಗಟ್ಟೆ ಬದಲಾವಣೆ ಮಾಡಲು ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ, ಚುನಾವಣಾ ತಹಶೀಲ್ದಾರ್‌ ಕುಸುಮ, ತಹಶೀಲ್ದಾರ್‌ ಮಹೇಶ್‌, ಅನಿಲ್ ಕುಮಾರ್‌, ಸಿನೋಜ್‌ ಉಪಸ್ಥಿತರಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English