ಮಂಗಳೂರು : ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

12:46 PM, Friday, September 6th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

sasikanthಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ ಕಾರಣಗಳಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ದ.ಕ ಜಿಲ್ಲಾಧಿಕಾರಿಗೂ ಮುಂಚೆ ಇವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.

ಅಕ್ಟೋಬರ್ 2017 ನಿಂದ ಸಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿದ್ದರು. ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಠಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English