ಚಂದ್ರಯಾನ-2 ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿಯುವುದನ್ನು ನೋಡಲು ಕುತೂಹಲ : ನರೇಂದ್ರ ಮೋದಿ

4:18 PM, Friday, September 6th, 2019
Share
1 Star2 Stars3 Stars4 Stars5 Stars
(No Ratings Yet)
Loading...

moditwitನವದೆಹಲಿ :ಚಂದ್ರನ ಅಂಗಳದ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 2 ನೌಕೆಯ ವಿಕ್ರಮ್ ಲ್ಯಾಂಡರ್ ಇಳಿಯಲು ಕೆಲವೇ ಗಂಟೆಗಳು ಬಾಕಿ ಇದ್ದು, ಇಸ್ರೋದ ಐತಿಹಾಸಿಕ ಸಾಧನೆಯ ಈ ವಿಶೇಷ ಕ್ಷಣಗಳನ್ನು ಜನರು ಕಣ್ತುಂಬಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿಕೊಂಡಿದ್ದಾರೆ.

ಚಂದ್ರನ ಮೇಲೆ ಲ್ಯಾಂಡರ್ ಇಳಿಯುವುದನ್ನು ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ವೀಕ್ಷಿಸಲು ತುಂಬಾ ಕುತೂಹಲಿಯಾಗಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಇಸ್ರೋದ ಈ ಐತಿಹಾಸಿಕ ಸಾಧನೆಯ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ನಾನು ತುಂಬಾ ಕಾತುರನಾಗಿದ್ದೇನೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English