ಮಂಗಳೂರು : 50 ವರ್ಷದ ಗುತ್ತಿಗೆದಾರ ಬಾವಿಗೆ ಹಾರಿ ಆತ್ಮಹತ್ಯೆ

5:21 PM, Saturday, September 7th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

jaya-alwaಮಂಗಳೂರು : ನಗರದ ಕೊಟ್ಟಾರದಲ್ಲಿ 50 ವರ್ಷದ ಗುತ್ತಿಗೆದಾರರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.6 ರಂದು ಶುಕ್ರವಾರ ರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕೊಟ್ಟಾರ ನಿವಾಸಿ ಜಯಕರ ಆಳ್ವಾ (50) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಮಲಗಿದ್ದ ಪತಿ ಶನಿವಾರ ಬೆಳಗ್ಗೆ ನಾಪತ್ತೆಯಾಗಿರುವುದನ್ನು ಗಮನಿಸಿ ಹುಡುಕಾಟ ಆರಂಭಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 6 ರಂದು ರಾತ್ರಿ ಮನೆಮಂದಿ ಮಲಗಿದ್ದ ಸಂದರ್ಭ ಜಯ ಆಳ್ವಾ ಮನೆಯ ಹಿಂಬಾಗಿಲಿನಿಂದ ಹೊರಗೆ ಹೋಗಿ ತಮ್ಮ ಮನೆಯ ಸನಿಹವಿರುವ ಬಾವಿಗೆ ಹಾರಿರಬಹುದು ಎಂದು ಶಂಕಿಸಲಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ಘಟನೆ ಕುರಿತು ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯಕರ ಆಳ್ವ ಬಂಟರ ಸಂಘದಲ್ಲಿ ಸದಾ ಕ್ರಿಯಾಶೀಲರಾಗಿರುತ್ತಿದ್ದರು, ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂದಾಳತ್ವ ವಹಿಸಿ ಎಲ್ಲರೊಂದಿಗೆ ಆತ್ಮೀಯವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English