ಡಿಕೆ.ಶಿವಕುಮಾರ್ ಶೀಘ್ರ ಬಿಡುಗಡೆಗೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಿದ ಲಕ್ಷ್ಮೀ ಹೆಬ್ಬಾಳ್ಕರ್

2:33 PM, Monday, September 9th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

lakshimi-hebbalkarಉಡುಪಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶೀಘ್ರ ಬಿಡುಗಡೆ ಆಗುವಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ವಿಶೇಷ ಚಂಡಿಕಾ ಹೋಮದ ಹರಕೆ ಹೇಳಿಕೊಂಡಿದ್ದರು. ಹಾಗಾಗಿ ಇಂದು ಮುಂಜಾನೆಯಿಂದ ಡಿ.ಕೆ.ಶಿಯವರ ಕುಟುಂಬಸ್ಥರಿಂದ ಚಂಡಿಕಾಹೋಮ ನೆರವೇರಿತು.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿಇಂದು ಮುಂಜನೆಯಿಂದ ಚಂಡಿಕಾಹೋಮ ನೆರವೇರಿತು. ಈ ವೇಳೆ ಡಿ.ಕೆ.ಶಿಯವರ ದೊಡ್ಡಪ್ಪ ಮತ್ತು ಚಿಕ್ಕಪ್ಪನ ಮಕ್ಕಳು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಡಿಕೆಶಿ ಶೀಘ್ರ ಬಿಡುಗಡೆ ಆಗುವಂತೆ ಚಂಡಿಕಾ ಹೋಮದ ಹರಕೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೊಂಡಿದ್ದರು ಎನ್ನಲಾಗಿದೆ. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನೆರವೇರಿತು. ಶಿವಕುಮಾರ್ ಅವರ ಸಂಕಷ್ಟಗಳೆಲ್ಲ ಪರಿಹಾರವಾಗಿ ಶೀಘ್ರವಾಗಿ ಬಿಡುಗಡೆಗೊಳ್ಳಲಿ ಎಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ರಾಜ್ಯ ಕಾಂಗ್ರೆಸ್‍ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಈ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English