ಪಿಲಿಕುಳ ನಿಸರ್ಗಧಾಮದ ಪ್ರಾಣಿ ಪಾಲಕ ಆತ್ಮಹತ್ಯೆ

5:46 PM, Monday, September 9th, 2019
Share
1 Star2 Stars3 Stars4 Stars5 Stars
(No Ratings Yet)
Loading...

zookeeperಮಂಗಳೂರು : ಪಿಲಿಕುಳ ನಿಸರ್ಗಧಾಮದ ಪ್ರಾಣಿ ಸಂಗ್ರಹಾಲಯದ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಶೋಕ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಅಶೋಕ ಸುಮಾರು 6 ವರ್ಷಗಳಿಂದ ಪಿಲಿಕುಳ ಪ್ರಾಣಿ ಸಂಗ್ರಹಾಲಯದಲ್ಲಿ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಪಿಲಿಕುಳದ ತನ್ನ ಕ್ವಾರ್ಟರ್ಸ್‌ನ ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಗೆ ಕಾರಣ ತಿಳಿದುಬಂದಿಲ್ಲ.ಕಾವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English