ಮಂಗಳೂರು : ಪ್ರಥಮ ಬಾರಿಗೆ ವಿದ್ಯಾರ್ಥಿ ತುಳು ಸಮ್ಮೇಳನ

4:10 PM, Monday, September 16th, 2019
Share
1 Star2 Stars3 Stars4 Stars5 Stars
(No Ratings Yet)
Loading...

thulu-sanmelanaಮಂಗಳೂರು : ತುಳು ಪರಿಷತ್ ಆಶ್ರಯದಲ್ಲಿ ಪ್ರಥಮ ಬಾರಿಗೆ ವಿದ್ಯಾರ್ಥಿ ತುಳು ಸಮ್ಮೇಳನ ಡಿಸೆಂಬರ್ನಲ್ಲಿ ನಗರದ ಪುರಭವನದಲ್ಲಿ ನಡೆಯಲಿದೆ.

ವಿದ್ಯಾರ್ಥಿ ತುಳು ಸಮ್ಮೇಳನ ಆಯೋಜನಾ ಸಮಿತಿಯ ಗೌರವಾಧ್ಯಕ್ಷ ಸ್ವರ್ಣ ಸುಂದರ್ ಅವರು ಮಾತನಾಡಿ, ಯುವ ಸಮುದಾಯದಲ್ಲಿ ತುಳು ಭಾಷೆ, ಸಂಸ್ಕೃತಿಯ ಬಗ್ಗೆ ಅಭಿಮಾನ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ತುಳು ಸಮ್ಮೇಳನವು ಅತ್ಯಂತ ಮಹತ್ವದ ಕಾರ್ಯಕ್ರಮವಾಗಲಿದೆ. ತುಳು ಭಾಷಿಗರೆಲ್ಲರೂ ಈ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಹೇಳಿದರು.

ಸಮ್ಮೇಳನ ಸಮಿತಿಯ ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುವರು. ಕಾಲೇಜು ವಿದ್ಯಾರ್ಥಿಗಳೇ ಸಮ್ಮೇಳನದ ಗೋಷ್ಠಿ ಕಾರ್ಯಕ್ರಮಗಳನ್ನು ನಡೆಸಿಕೊಡುವರು ಎಂದು ವಿವರ ನೀಡಿದರು.

ಪ್ರಧಾನ ಸಭೆಗೆ ಮೊದಲು ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಸಮಾಲೋಚನಾ ಸಭೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಸಮ್ಮೇಳನದ ಕಾರ್ಯಕ್ರಮಗಳ ಸ್ವರೂಪದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ತಮ್ಮ ಕಾಲೇಜುಗಳಲ್ಲಿ ವಿವಿಧ ಗೋಷ್ಠಿ, ಸ್ಪರ್ಧೆಗಳನ್ನು ಆಯೋಜಿಸುವುದಾಗಿ ವಿದ್ಯಾರ್ಥಿಗಳು ತಿಳಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English