ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಹಿರಿಯ ಕೆಎಎಸ್ ಅಧಿಕಾರಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ನೇಮಕಗೊಂಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಮುಹಮ್ಮದ್ ನಝೀರ್ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅಜಿತ್ ಕುಮಾರ್ ಹೆಗ್ಡೆ ಅವರನ್ನು ನೇಮಕಗೊಳಿಸಿ ಎಂದು ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಅಜಿತ್ ಕುಮಾರ್ ಈ ಮೊದಲು ಬೆಂಗಳೂರಿನ ಜಲಾನಯನ ಅಭಿವೃದ್ಧಿ ಇಲಾಖೆಯ ಅಪರ ನಿರ್ದೇಶಕ ಹಾಗೂ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
Click this button or press Ctrl+G to toggle between Kannada and English